Advertisement

ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ…ಹಾರಿ ಹೋಯ್ತು ಮೂವರ ಪ್ರಾಣ  

09:59 PM Mar 03, 2021 | Team Udayavani |

ಗುಜರಾತ್ : ಒಂದೇ ಕುಟುಂಬದ ಆರು ಜನ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಇಂದು ( ಮಾರ್ಚ್ 3) ಗುಜರಾತಿನ ವಡೋದರದಲ್ಲಿ ನಡೆದಿದೆ.

Advertisement

ವಡೋದರದ ಸಾಮಾ ಎನ್ನುವ ಪ್ರದೇಶ ಈ ದುರ್ಘಟನೆಗೆ ಸಾಕ್ಷಿಯಾಗಿದೆ. ಕೀಟನಾಶಕ ಸೇವಿಸಿ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ದುರಂತದಲ್ಲಿ ಮೂವರು ಅಸುನೀಗಿದ್ದಾರೆ. ಇನ್ನುಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಇಡೀ ಕುಟುಂಬ ಸಾವಿಗೆ ಶರಣಾಗಲು ಹೊರಟಿದ್ದ ಸುದ್ದಿ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಈ ಕುಟುಂಬ ಹಣಕಾಸಿನ ತೊಂದರೆ ಎದುರಿಸುತ್ತಿತ್ತು. ಇದೇ ಕಾರಣಕ್ಕೆ ಸಾವಿಗೆ ಶರಣಾಗಲು ಪ್ರಯತ್ನಿಸಿರಬಹುದು ಎಂದು ಸುತ್ತಮುತ್ತಲಿನ ಕುಟುಂಬಗಳು ಶಂಕಿಸಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭರತ್ ರಾಥೋಡ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next