Advertisement
ಶುಕ್ರವಾರ ಈ ಕುರಿತು ಮಾಹಿತಿ ನೀಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಆಡಳಿತ ಮಂಡಳಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಸಹಕಾರ ನೀಡಿ, ಯಶಸ್ವಿಗೊಳಿಸಿದ್ದಾರೆ ಎಂದರು.
ಕಾಸರಗೋಡು ಜಿಲ್ಲೆ ಸಹಿತ ರಾಜ್ಯದ 31 ಜಿಲ್ಲೆಗಳ 173 ತಾಲೂಕು ಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗಿದೆ. 3,06,674 ಸ್ವಯಂಸೇವಕರು ಪಾಲ್ಗೊಂಡಿದ್ದು, ಬೆಳಗಾವಿಯಲ್ಲಿ ಅತಿ ಹೆಚ್ಚು ಅಂದರೆ 545 ಕೇಂದ್ರಗಳನ್ನು ಸ್ವಚ್ಛ ಮಾಡಲಾಗಿದ್ದು, ಧಾರವಾಡದಲ್ಲಿ ಅತೀ ಹೆಚ್ಚು ಅಂದರೆ 23,677 ಸೇವಕರು ಭಾಗವಹಿಸಿದ್ದಾರೆ. ಒಟ್ಟು 9,654 ಮಂದಿರ / ಬಸದಿಗಳು, 104 ಚರ್ಚ್, 96 ಮಸೀದಿ ಹಾಗೂ 427 ಇತರ ಕೇಂದ್ರಗಳಲ್ಲಿ ಈ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಡಾ| ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.