Advertisement
ಇಲ್ಲಿನ ಸರಕಾರಿ ರಾಮನಾರಾಯಣ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ‘ಪ್ರಗತಿ ಪಥ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಆನ್ ಲೈನ್ ನೋಂದಣಿ ಮಾಡಿಕೊಂಡಿದ್ದು ಪಾಲ್ಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
Related Articles
Advertisement
ಬೆಂಗಳೂರು ಮತ್ತು ಕರ್ನಾಟಕ ಇಂದು ಜಗತ್ತಿನಲ್ಲಿ ಮುಂಚೂಣಿಯಲ್ಲಿವೆ. ಇದಕ್ಕೆ ಇಲ್ಲಿರುವ ರಚನಾತ್ಮಕ ವಾತಾವರಣವೇ ಕಾರಣ ಎಂದು ಸಚಿವರು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಮಾತನಾಡಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ಎಲ್. ಕೃಷ್ಣಮೂರ್ತಿ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಎಸ್. ಶೈಲಜಾ, ರೋಟರಿ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷ ಸಂಜಯ್ ಉದಾನಿ ಇದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಚಂದ್ರಶೇಖರ್ ಸ್ವಾಗತಿಸಿದರು.