Advertisement

ಶಿಕ್ಷಣದ ಹಂತದಲ್ಲೇ ಅಗತ್ಯವಾದ ಕೌಶಲ್ಯ ತರಬೇತಿ: ಡಿಸಿಎಂ ಅಶ್ವಥ್ ನಾರಾಯಣ

04:43 PM Aug 24, 2020 | keerthan |

ಬೆಂಗಳೂರು: ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜು ಪಠ್ಯದಲ್ಲಿಯೇ ಕೌಶಲ್ಯ ತರಬೇತಿ ವಿಷಯವನ್ನು ಸೇರಿಸಲಾಗುವುದು. ಇದರಿಂದ ರಾಜ್ಯದಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಸಹಾಯಕವಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

Advertisement

ಮಲ್ಲೇಶ್ವರದ ಒಳಾಂಗಣ ಕ್ರೀಡಾಂಗಣದಲ್ಲಿ ತೆರೆಯಲಾಗಿರುವ “ಮಲ್ಲೇಶ್ವರಂ ಕೌಶಲ್ಯ ಕೇಂದ್ರ”ದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಇವತ್ತು ಕೌಶಲ್ಯವಿರುವುದರ ಜತೆಗೆ, ಆ ಕೌಶಲ್ಯಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ನೌಕರಿ ಸಿಗುತ್ತದೆಯೇ ಎಂಬುದು ಬಹಳ ಮುಖ್ಯವಾದ ವಿಚಾರ. ಹೀಗಾಗಿ ಜಾಬ್‌ ಮಾರುಕಟ್ಟೆಗೆ ತಕ್ಕ ಹಾಗೆ, ಅಂದರೆ ಕೈಗಾರಿಕೆಗಳಿಗೆ ಅಗತ್ಯವಿರುವ ದಿಕ್ಕಿನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾಂಕ್ಷಿಗಳಿಗೆ ತರಬೇತಿ ನೀಡಲಾಗುವುದು ಎಂದರು.

ಇದನ್ನೂ ಓದಿ: ಡಿ.ಕೆ ಶಿವಕುಮಾರ್​ ಒಬ್ಬ ದೊಡ್ಡ ಕಳ್ಳ, ಫೋನ್ ಕದ್ದಾಲಿಕೆ ಆರೋಪ ಶುದ್ಧಸುಳ್ಳು: ಯೋಗೇಶ್ವರ್

ಹಿಂದಿನಿಂದ ಇದೇ ರೀತಿಯ ವೈರುಧ್ಯವನ್ನು ನಾವು ಗಮನಿಸುತ್ತಾ ಬಂದಿದ್ದೇವೆ. ಕೆಲಸಗಳೇ ಬೇರೆ ಇರುತ್ತವೆ. ಓದಿದ್ದೇ ಬೇರೆ, ಸಿಗುವ ಕೆಲಸಗಳೇ ಬೇರೆ. ಇದರಿಂದ ದಕ್ಷತೆ ಇರುವುದಿಲ್ಲ ಎಂಬುದು ಸಾಬೀತಾಗಿದೆ. ಇಂಥ ಅಂತರದಿಂದ ನಿರುದ್ಯೋಗ ಹೆಚ್ಚುತ್ತಲೇ ಹೋಗುತ್ತಿದೆ. ಇದನ್ನು ನಿವಾರಿಸಲು ಸರಕಾರ ಪಠ್ಯದಲ್ಲೇ ಕೌಶಲ್ಯಕ್ಕೆ ಸಂಬಂಧಿಸಿದ ವಿಷಯವನ್ನು ಸೇರಿಸಲು ಮುಂದಾಗಿದೆ. ಶಿಕ್ಷಣದ ಹಂತದಲ್ಲೇ ಅಗತ್ಯವಾದ ಕುಶಲತೆಯನ್ನು ಹೊಂದಬೇಕಾಗುತ್ತದೆ. ಉದ್ಯೋಗದ ನಂತರ ಅದನ್ನು ಯಾರೂ ಹೇಳಿಕೊಡುವ ಸನ್ನಿವೇಶ ಇರುವುದಿಲ್ಲ ಎಂದು ಡಿಸಿಎಂ ಹೇಳಿದರು

Advertisement

Udayavani is now on Telegram. Click here to join our channel and stay updated with the latest news.

Next