Advertisement
ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವಾಲಯ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಏರ್ಪಡಿಸಿದ್ದ ಭಾರತೀಯ ಕೌಶಲ್ಯಾಭಿವೃದ್ಧಿ ಸೇವಾ ಅಧಿಕಾರಿಗಳಿಗೆ ಬುನಾದಿ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾತನಾಡಿ, ಮೈಸೂರು ನಗರದಲ್ಲಿ ಭಾರತ ಕೌಶಲ್ಯಾಭಿವೃದ್ಧಿ ಮತ್ತು ಸೇವೆಗಳ ಇಲಾಖೆಯ ಪ್ರಥಮ ತಂಡದ ಅಧಿಕಾರಿಗಳ ಸಾಮಾನ್ಯ ಬುನಾದಿ ತರಬೇತಿ ನಡೆಯಲಿದ್ದು, ಎಲ್ಲಾ ಅಧಿಕಾರಿಗಳು ಸೂಕ್ತ ತರಬೇತಿ ಪಡೆದುಕೊಳ್ಳಲು ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.
ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ಬುನಾದಿ ಜೊತೆಯಲ್ಲಿ ಲಿಂಗ ಸಂವೇದನಾ ಶೀಲತೆ, ಮಹಿಳಾ ಅಧ್ಯಯನ, ಮಾಹಿತಿ ಹಕ್ಕು ಅಧಿನಿಯಮ, ಸಕಾಲ ಮುಂತಾದ ತರಬೇತಿ ಕಾರ್ಯಕ್ರಮಗಳನ್ನು ಅಧಿಕಾರಿಗಳ ಬೇಡಿಕೆಯನುಸಾರ ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು ಇದರಿಂದ ಭಾರತದ ಯುವ ಅಧಿಕಾರಿಗಳಿಗೆ ಹೆಚ್ಚಿನ ಅನುಕೂಲ ಆಗಲಿದೆ ಹಾಗೂ ಉದ್ಯಮ ಕ್ಷೇತ್ರ ಬೆಳವಣಿಗೆಗೆ ಸಹಾಯವಾಗಲಿದೆ ಎಂದರು.
ಕೌಶಲ್ಯ ಕರ್ನಾಟಕ: ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ರಾಜ್ಯ ಸರ್ಕಾರ ಅದರ ನಿರ್ವಹಣೆ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯಡಿ ಯುವ ವಿದ್ಯಾರ್ಥಿಗಳಿಗೆ ತರಬೇತಿ ಕೇಂದ್ರಗಳಲ್ಲಿ ಕೌಶಲ್ಯ ತರಬೇತಿ ನೀಡಿ ವಿವಿಧ ಉದ್ಯೋಗ ಸೃಷ್ಟಿಸಲು ಸಾಧ್ಯವಾಗಿದೆ ಎಂದರು. ರಾಜ್ಯದಲ್ಲಿ 40 ತರಬೇತಿ ಕೇಂದ್ರಗಳಿದ್ದು, 2019-20ರ ಅವಧಿಯಲ್ಲಿ 14,327 ಮಂದಿಗೆ ತರಬೇತಿ ನೀಡಲಾಗುವುದು.
ರಾಜ್ಯಸರ್ಕಾರವು ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರಗಳ ಜತೆಗೂಡಿ 8042 ಮಂದಿಗೆ ಮಾಹಿತಿ ನೀಡಿದ್ದು,359 ಮಂದಿ ಉದ್ಯೋಗ ಪಡೆದಿದ್ದಾರೆ ಎಂದು ಹೇಳಿದರು. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ನಿರಂಜನ್ ಕುಮಾರ್, ಭಾರತ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ ಕಾರ್ಯದರ್ಶಿ ಡಾ.ಕೆ.ಪಿ. ಕೃಷ್ಣನ್, ರಾಜೇಶ್ ಅಗರ್‌ವಾಲ್, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಮಹಾ ನಿರ್ದೇಶಕ ಕಪಿಲ್ ಮೋಹನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಶ್ವದರ್ಜೆ ಕೌಶಲ್ಯ ತರಬೇತಿ: ಭಾರತದಲ್ಲಿ ಯುವ ಜನರ ಸಂಖ್ಯೆ ಹೆಚ್ಚಿದ್ದು, ಅವರು ಕೆಲಸ ಮಾಡುತ್ತಿರುವ ಕ್ಷೇತ್ರದಲ್ಲಿ ಪರಿಣಿತರಾಗಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ನಮ್ಮ ಸರ್ಕಾರವು ವಿಶ್ವದರ್ಜೆಯ ಕೌಶಲ್ಯ ತರಬೇತಿಯನ್ನು ನೀಡುತ್ತಿರುವುದರಿಂದ ಯುವಜನರು ದೇಶದೊಳಗೆ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಾಭ ಪಡೆಯಬಹುದಾಗಿದೆ. ಕೌಶಾಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆಯಿಂದ ದೇಶದ ಭವಿಷ್ಯ ಉತ್ತಮವಾಗಲಿದೆ. ಭಾರತದಲ್ಲಿ ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಿಗೆ ಕೌಶಲ್ಯ ತರಬೇತಿ ನೀಡುವುದರಿಂದ ಉದ್ಯಮಶೀಲತೆಗೆ ತುಂಬಾ ಪೂರಕವಾದ ಬೆಳವಣಿಗೆ ಕಂಡು ಬಂದಿದೆ ಎಂದು ಸಚಿವ ಡಾ.ಮಹೇಂದ್ರನಾಥ್ ಪಾಂಡೆ ತಿಳಿಸಿದರು.