ಗ್ಯಾಂಗ್ಟಾಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಹಿಮಾಲಯ ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಪಾಲ್ಜೋರ್ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು ರಾಜ್ಯಪಾಲ ಲಕ್ಷ್ಮಣ್ ಆಚಾರ್ಯ ಅವರು ತಮಾಂಗ್ ಮತ್ತು ಅವರ ಮಂತ್ರಿ ಮಂಡಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಸಿಕ್ಕಿಂ ಮಂತ್ರಿ ಮಂಡಳಿಯು ಮುಖ್ಯಮಂತ್ರಿ ಸೇರಿದಂತೆ 12 ಸದಸ್ಯರ ಬಲವನ್ನು ಹೊಂದಿದೆ. ಇಂದು ಸಂಜೆ 4 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು ಈ ಸಮಾರಂಭದಲ್ಲಿ ಸುಮಾರು 30,000 ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎನ್ನಲಾಗಿದೆ. ಪ್ರಮಾಣ ವಚನ ಸಮಾರಂಭದ ಹಿನ್ನೆಲೆಯಲ್ಲಿ ಗ್ಯಾಂಗ್‌ಟಾಕ್‌ನಾದ್ಯಂತ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.
ಅಸೆಂಬ್ಲಿ ಚುನಾವಣೆಯಲ್ಲಿ ಎಸ್‌ಕೆಎಂನ ಪ್ರಚಂಡ ವಿಜಯ ಮತ್ತು ಸಿಕ್ಕಿಂನ ಏಕೈಕ ಲೋಕಸಭೆ ಸ್ಥಾನವನ್ನು ಮುನ್ನಡೆಸಿದ ತಮಾಂಗ್, ಜೂನ್ 2 ರಂದು ನಡೆದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದರು.
ಲೋಕಸಭೆ ಚುನಾವಣೆಯಲ್ಲಿ 32 ವಿಧಾನಸಭಾ ಸ್ಥಾನಗಳ ಪೈಕಿ 31 ಸ್ಥಾನಗಳನ್ನು ಎಸ್‌ಕೆಎಂ ಗೆದ್ದುಕೊಂಡಿದೆ. ತಮಾಂಗ್ ಅವರು ಸ್ಪರ್ಧಿಸಿದ್ದ ರೆನಾಕ್ ಮತ್ತು ಸೊರೆಂಗ್-ಚಕುಂಗ್ ಎರಡೂ ಕ್ಷೇತ್ರಗಳಿಂದ ಗೆದ್ದಿಕೊಂಡಿದ್ದಾರೆ.
2019 ರವರೆಗೆ ಸತತ 25 ವರ್ಷಗಳ ಕಾಲ ರಾಜ್ಯವನ್ನು ಆಳಿದ ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್‌ಡಿಎಫ್) ಲೋಕ ಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ: Sanjay Singh: ವರ್ಷದೊಳಗೆ NDA ಸರ್ಕಾರ ಪತನವಾಗಲಿದೆ… ಇದೇ ಕಾರಣ ಎಂದ ಸಂಸದ ಸಂಜಯ್ ಸಿಂಗ್