Advertisement

ಯುಪಿ: ಜನರ ಆಕ್ರೋಶಕ್ಕೆ ಬೆದರಿ ಪ್ರಚಾರದಿಂದ ವಾಪಸ್ ತೆರಳಿದ ಬಿಜೆಪಿ ಶಾಸಕ

02:26 PM Jan 20, 2022 | Team Udayavani |

ಮುಜಾಫರ್‌ನಗರ : ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಕಾವು ಏರತೊಡಗಿದ್ದು, ಮುನ್ವರ್‌ಪುರ ಗ್ರಾಮದಲ್ಲಿ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರನ್ನು ಸ್ಥಳದಿಂದ ಹೊರಹೋಗುವಂತೆ ಜನರು ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ.

Advertisement

ಚುನಾವಣಾ ಪ್ರಚಾರದ ಅಂಗವಾಗಿ ಬುಧವಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸೈನಿ ವಿರುದ್ಧ ಗ್ರಾಮಸ್ಥರು ಘೋಷಣೆಗಳನ್ನು ಕೂಗಿದರು.ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ, ಖತೌಲಿ ಶಾಸಕರು ಪ್ರತಿಭಟನೆಯ ನಂತರ ಕೋಪದಿಂದ ತಮ್ಮ ಕಾರಿಗೆ ಹತ್ತುತ್ತಿರುವುದನ್ನು ಕಾಣಬಹುದಾಗಿದೆ.

ಘಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೈನಿ ಅವರು, ತಮ್ಮ ಭೇಟಿಗೆ ವಿರೋಧ ವ್ಯಕ್ತಪಡಿಸಿದವರು ಮದ್ಯದ ಅಮಲಿನಲ್ಲಿದ್ದರು ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next