Advertisement

ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ವಿದ್ವತ್‌

12:47 PM Feb 24, 2018 | Team Udayavani |

ಬೆಂಗಳೂರು: ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಮೇಲಿನ ಹಲ್ಲೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ಇಬ್ಬರು ಆರೋಪಿಗಳ ಪೈಕಿ ಒಬ್ಟಾತನ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Advertisement

ಸದ್ಯ ಪ್ರಕರಣದಲ್ಲಿ ಮೊಹಮ್ಮದ್‌ ಸೇರಿ ಏಳು ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಈ ಮಧ್ಯೆ ಮತ್ತೂಬ್ಬ ಆರೋಪಿ ಶ್ರೀಕೃಷ್ಣನಿಗಾಗಿ ಹುಡುಕಾಟ ನಡೆಯುತ್ತಿದೆ. ಆದರೆ, ಘಟನೆ ವೇಳೆ ಮತ್ತೂಬ್ಬ ಆರೋಪಿ ನವಾಜ್‌ ಎಂಬಾತನ ಪಾತ್ರದ ಬಗ್ಗೆ ತನಿಖಾ ತಂಡಗಳು ಮಾಹಿತಿ ಸಂಗ್ರಹಿಸಿವೆ. ಸದ್ಯದಲ್ಲೇ ಈತನನ್ನು ಬಂಧಿಸಲಾಗುವುದು ಎಂದು ಅಧಿಕಾರಿಯೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ.

ಇನ್ನು ಮಲ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವು ವಿದ್ವತ್‌ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ. ಈ ಮಧ್ಯೆ ಗಣ್ಯರು, ರಾಜಕೀಯ ಮುಖಂಡರು ಭೇಟಿ ನೀಡಿ ವಿದ್ವತ್‌ ಆರೋಗ್ಯ ವಿಚಾರಿಸುತ್ತಿದ್ದಾರೆ. ವಿದ್ವತ್‌ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಲಹರಿ ಸಂಸ್ಥೆ ಮಾಲೀಕ ವೇಲು,ಹೆಚ್ಚಿನ ಚಿಕಿತ್ಸೆಗಾಗಿ ವಿದ್ವತ್‌ನನ್ನು ಸಿಂಗಾಪುರಕ್ಕೆ ಸ್ಥಳಾಂತರಿಸುವುದಿಲ್ಲ.

ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಿದ್ದಾರೆ ಎಂದರು. ವಿಪಕ್ಷನಾಯಕ ಜಗದೀಶ್‌ ಶೆಟ್ಟರ್‌, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಸೇರಿದಂತೆ ಕೆಲ ರಾಜಕೀಯ ಮುಖಂಡರು ಭೇಟಿ ನೀಡಿ ವಿದ್ವತ್‌ ಆರೋಗ್ಯ ವಿಚಾರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next