Advertisement

ಸಕ್ರಿಯ ರಾಜಕಾರಣಕ್ಕೆ ಕಾಂಗ್ರೆಸ್ ಮುಖಂಡ ಎಸ್.ಎಂ.ಕೃಷ್ಣ ಗುಡ್ ಬೈ

05:23 PM Jan 28, 2017 | Team Udayavani |

ಬೆಂಗಳೂರು:ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿರುವ ನಿರ್ಧಾರ ಕೈಗೊಂಡಿರುವುದಾಗಿ ಟಿವಿ9 ವರದಿ ತಿಳಿಸಿದೆ.

Advertisement

ಸಕ್ರಿಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ಅವರು ರಾಜೀನಾಮೆ ನೀಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ತಿಳಿಸಿರುವುದಾಗಿ ವರದಿ ವಿವರಿಸಿದೆ.

ಎಲ್ಲಾ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿಯುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆನ್ನಲಾಗಿದೆ. ಕಾಂಗ್ರೆಸ್ ಸದಸ್ಯತ್ವ ನವೀಕರಣ ಮಾಡಿಕೊಳ್ಳುವ ಪ್ರಶ್ನೆ ಇಲ್ಲ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

ಸಕ್ರಿಯ ರಾಜಕಾರಣದಿಂದ ತಾನು ಯಾಕೆ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂಬ ಬಗ್ಗೆ ನಾಳೆ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಲಿದ್ದಾರೆ ಎಂದು ವರದಿ ಹೇಳಿದೆ. 

Advertisement

Udayavani is now on Telegram. Click here to join our channel and stay updated with the latest news.

Next