Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಎಕ್ಸ್’ಪ್ರೆಸ್ ವೇ ಗೆ ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.
Related Articles
Advertisement
ಇಷ್ಟೇ ಅಲ್ಲದೇ ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇ, ಗಂಗಾ ಎಕ್ಸ್ಪ್ರೆಸ್ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್ಪ್ರೆಸ್ವೇ ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದರು. ದಶಪಥ ಹೆದ್ದಾರಿಯಿಂದಾಗಿ ಮೈಸೂರು – ಬೆಂಗಳೂರು ಮಧ್ಯದ ಸುಮಾರು 140 ಕಿ.ಮೀ. ದೂರದ ಪ್ರಯಾಣ ವ್ಯಾಪ್ತಿಯನ್ನು ಕೇವಲ 90 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.