Advertisement

ಮೈಸೂರು- ಬೆಂಗಳೂರು ಹೈವೇಗೆ ಒಡೆಯರ್ ಹೆಸರಿಡಲು ಎಸ್.ಎಂ ಕೃಷ್ಣ ಒತ್ತಾಯ

12:00 PM Jan 02, 2023 | Team Udayavani |

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್​ ಪ್ರೆಸ್ ವೇಗೆ ಎರಡನೇ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಎಕ್ಸ್’ಪ್ರೆಸ್ ವೇ ಗೆ ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್​ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಮನವಿ ಮಾಡಿದ್ದರು.

ಈ ಎಕ್ಸ್‌ಪ್ರೆಸ್‌ವೇಯ ಪ್ರಯೋಜನವು ಬಹು ಆಯಾಮಗಳಾಗಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಮತ್ತು ಮುಂತಾದವು ಪ್ರಮುಖ ಪ್ರಯೋಜನಗಳಿವೆ ಎಂದು ಹೇಳಿದ್ದರು.

ಇದನ್ನೂ ಓದಿ:ನೋಟ್ ಬ್ಯಾನ್ ನಿರ್ಧಾರಕ್ಕೆ ಸುಪ್ರೀಂ ಸಮ್ಮತಿ: ಕೇಂದ್ರದ ನಿರ್ಧಾರದಲ್ಲಿ ಹಸ್ತಕ್ಷೇಪಕ್ಕೆ ನಕಾರ

Advertisement

ಇಷ್ಟೇ ಅಲ್ಲದೇ ಉತ್ತರ ಪ್ರದೇಶದ ಯಮುನಾ ಎಕ್ಸ್​​ಪ್ರೆಸ್​ವೇ, ಗಂಗಾ ಎಕ್ಸ್​​ಪ್ರೆಸ್​ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್​ಪ್ರೆಸ್​ವೇ ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ ಕಾವೇರಿ ಎಕ್ಸ್​​ಪ್ರೆಸ್ ವೇ ಎಂದು ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದರು. ದಶಪಥ ಹೆದ್ದಾರಿಯಿಂದಾಗಿ ಮೈಸೂರು – ಬೆಂಗಳೂರು ಮಧ್ಯದ ಸುಮಾರು 140 ಕಿ.ಮೀ. ದೂರದ ಪ್ರಯಾಣ ವ್ಯಾಪ್ತಿಯನ್ನು ಕೇವಲ 90 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next