ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ದಿನಕ್ಕೆ 50 ಸಾವಿರ ಸೊಂಕಿನ ಪ್ರಕರಣಗಳು ಮತ್ತೆಯಾಗುತ್ತಿವೆ. ಇದೇ ಹಿನ್ನೆಲೆಯಲ್ಲಿ ಕೇಂದ್ರ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಎಸ್ ಎಂ ಕೃಷ್ಣಾ ಕೋವಿಡ್ ಸೋಂಕಿತರ ನೆರವಿಗೆ ನಿಂತಿದ್ದಾರೆ.
Advertisement
ಮಂಡ್ಯ ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಿಗೆ 100 ಆಕ್ಸಿಜನ್ ಸಿಲಿಂಡರ್ ಗಳು ಮತ್ತು 10,000 ಮಾಸ್ಕ್ ನೀಡುವ ಮೂಲಕ ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.
ಈ ಬಗ್ಗೆ ಎಸ್ ಎಂ ಕೃಷ್ಣ ಮಂಡ್ಯ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ಮಾಸ್ಕ್ ಮತ್ತು ಆಕ್ಸಿಜನ್ ಸಿಲಿಂಡರ್ ಗಳನ್ನು ಹಸ್ತಾಂತರ ಮಾಡುತ್ತಿರುವುದಾಗಿ ತಿಳಿಸದ್ದಾರೆ.