Advertisement

ಗುಣಮಟ್ಟದ ಶಿಕ್ಷಣಕ್ಕೆ ಎಸ್‌.ಎಂ. ಶೆಟ್ಟಿ ಶಿಕ್ಷಣ ಸಂಸ್ಥೆ ಹೆಸರುವಾಸಿ: ಚಂದ್ರಹಾಸ್‌ ಶೆಟ್ಟಿ

05:39 PM Mar 13, 2021 | Team Udayavani |

ಮುಂಬಯಿ: ಮಹಾರಾಷ್ಟ್ರದಲ್ಲಿ  ಮಾದರಿ ಶಿಕ್ಷಣ ಸಂಸ್ಥೆ ಬಂಟರ ಸಂಘ ಎಸ್‌.ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಯ ಅಭಿವೃದ್ಧಿ ಬಗ್ಗೆ ಹೆಮ್ಮೆ ಎನಿಸುತ್ತದೆ. ದಾನಿಗಳ ಸಹಕಾರ, ಪೊವಾಯಿ ಶಿಕ್ಷಣ ಸಮಿತಿಯ ಪದಾಧಿಕಾರಿಗಳ ಪರಿಶ್ರಮ ಸಾರ್ಥಕವಾಗಿದೆ ಎಂದು ಬಂಟರ ಸಂಘ ಮುಂಬಯಿ ನೂತನ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ  ತಿಳಿಸಿದರು.

Advertisement

ಮಾ. 5ರಂದು ಸಂಜೆ ಬಂಟರ ಸಂಘ ಮುಂಬಯಿ ಇದರ ಪೊವಾಯಿ ಶಿಕ್ಷಣ ಸಮಿತಿಯ ಸಂಚಾಲಕತ್ವದಲ್ಲಿರುವ ಎಸ್‌.ಎಂ. ಶೆಟ್ಟಿ  ಶಿಕ್ಷಣ ಸಂಸ್ಥೆಯ ಸಂಕೀರ್ಣದ ಬಾಹ್ಯ ನೋಟದ ಸೌಂದರೀಕರಣ- ನವೀಕರಣ, ಸಂಕೀರ್ಣದ ತಡೆಗೋಡೆಯ ಸುಸಜ್ಜೀಕರಣ, ಕ್ರೀಡಾ ಸಂಕುಲ ಇನ್ನಿತರ ಸೌಕರ್ಯಗಳನ್ನು ಉದ್ಘಾಟಿಸಿ ಮಾತ ನಾಡಿದ ಅವರು, ಸಮಾಜದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಪೊವಾಯಿ ಎಸ್‌. ಎಂ. ಶೆಟ್ಟಿ  ಶಿಕ್ಷಣ ಸಂಸ್ಥೆಯಲ್ಲಿ  ಸಮುದಾಯದ ವಿದ್ಯಾರ್ಥಿಗಳಿಗಿಂತ ಹೆಚ್ಚು ಇತರ ಭಾಷೆ, ಜಾತಿ, ಧರ್ಮಗಳ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಎಲ್ಲ ವಿದ್ಯಾರ್ಥಿಗಳನ್ನು ಸಮಾನ ದೃಷ್ಟಿಯಿಂದ ನೋಡಲಾಗುತ್ತಿದೆ. ಉತ್ತಮ ಶಿಸ್ತು ಇಲ್ಲಿ ಎದ್ದು ಕಾಣುತ್ತಿದೆ. ಪರಿಣಿತ ಶಿಕ್ಷಕ ವೃಂದ, ಗುಣಮಟ್ಟದ ಶಿಕ್ಷಣ, ಉತ್ತಮ ಸೌಲಭ್ಯ ಹೊಂದಿರುವ ಈ ಸಂಸ್ಥೆ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸದಾ ಶ್ರಮಿಸುತ್ತಿರುವುದು ಅಭಿನಂದನೀಯ. ಮುಂದೆಯೂ ಈ ಸಂಸ್ಥೆ ಅತ್ಯುತ್ಛ ಮಟ್ಟಕ್ಕೇರಲಿ ಎಂದು ತಿಳಿಸಿ, ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪೊವಾಯಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಸಿಎ ಶಂಕರ್‌ ಬಿ. ಶೆಟ್ಟಿ  ಮಾತನಾಡಿ, ಸಂಘದ ಪದಾಧಿಕಾರಿಗಳ ಪ್ರೋತ್ಸಾಹ, ಶಿಕ್ಷಣ ಸಮಿತಿಯ ಪದಾಧಿಕಾರಿಗಳ ಸಾಧನೆ, ಶಿಕ್ಷಕವೃಂದದ ಪರಿಶ್ರಮವನ್ನು ಅಭಿನಂದಿಸಿದರು. ಕಳೆದ ಮೂರು ವರ್ಷಗಳಲ್ಲಿ ಕಾರ್ಯಾಧ್ಯಕ್ಷನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಸಂಘದ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಮತ್ತು ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಪೊವಾಯಿ ಶಿಕ್ಷಣ ಸಂಸ್ಥೆಯ ಪ್ರಗತಿಗಾಗಿ ಪ್ರೋತ್ಸಾಹವಿತ್ತ ದಾನಿಗಳನ್ನು ಸ್ಮರಿಸಿ ಅಭಿನಂದಿಸಿದರು.

ಆರಂಭದಲ್ಲಿ  ಪೊವಾಯಿ ಶಿಕ್ಷಣ ಸಮಿತಿಯ ಉಪ ಕಾರ್ಯಾಧ್ಯಕ್ಷ ನಿತ್ಯಾನಂದ ಹೆಗ್ಡೆ ಸ್ವಾಗತಿಸಿದರು. ಸಮಿತಿಯ ಪದಾಧಿ ಕಾರಿಯಾಗಿದ್ದ ಕ್ಷಣಗಳನ್ನು ಸ್ಮರಿಸಿದರು. ಉಪ ಕಾರ್ಯಾಧ್ಯಕ್ಷ ಬಿ. ಆರ್‌. ಶೆಟ್ಟಿ ಕಳೆದ ಮೂರು ವರ್ಷಗಳ ಸಮಿತಿಯ ಸಾಧನೆ

ಗಳನ್ನು ವಿವರಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿಂದು ಶಿಕ್ಷಣಕ್ಕೆ ಸಂಬಂಧಿಸಿ ಅತ್ಯಂತ ಕಠಿನ ಸ್ಪರ್ಧೆ ನಡೆಯುತ್ತಿದ್ದು, ಎಸ್‌.ಎಂ. ಶೆಟ್ಟಿ ಶಿಕ್ಷಣ ಸಂಸ್ಥೆ ಈ ಸ್ಪರ್ಧೆಯಲ್ಲಿ  ಈ ವರೆಗೆ ಮುಂಚೂಣಿಯಲ್ಲಿದೆ, ಮುಂದೆಯೂ ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಿದರು.

Advertisement

ಸಂಘದ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಆರ್‌. ಸಿ. ಶೆಟ್ಟಿ , ಸುಧಾಕರ ಎಸ್‌. ಹೆಗ್ಡೆ , ಪ್ರಭಾಕರ ಎಲ್‌. ಶೆಟ್ಟಿ, ವಿಶ್ವಸ್ಥ ಶಾಂತಾರಾಮ ಶೆಟ್ಟಿ ,

ಮುಲುಂಡ್‌ ಬಂಟ್ಸ್‌ ಅಧ್ಯಕ್ಷ ವಸಂತ ಶೆಟ್ಟಿ  ಪಲಿಮಾರು, ಸಂಘದ ಉಪಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ , ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್‌. ಕೆ. ಶೆಟ್ಟಿ , ಗೌರವ ಕೋಶಾಧಿಕಾರಿ ಸಿಎ ಹರೀಶ್‌ ಡಿ. ಶೆಟ್ಟಿ , ಜತೆ ಕಾರ್ಯದರ್ಶಿ ಇಂದ್ರಾಳಿ ದಿವಾಕರ ಶೆಟ್ಟಿ , ಜತೆ ಕೋಶಾಧಿಕಾರಿ ಮುಂಡಪ್ಪ ಎಸ್‌. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಕೃಷ್ಣ ವೈ. ಶೆಟ್ಟಿ , ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್‌ ಡಿ. ಶೆಟ್ಟಿ  ಉಪಸ್ಥಿತರಿದ್ದರು. ಸಂಘದ ನಿಕಟಪೂರ್ವ ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ ,

ಜತೆ ಕಾರ್ಯದರ್ಶಿ ಮಹೇಶ್‌ ಶೆಟ್ಟಿ , ಪೊವಾಯಿ ಶಿಕ್ಷಣ ಸಂಸ್ಥೆಯ ಉಪ ಕಾರ್ಯಾಧ್ಯಕ್ಷ ಬಿ. ಆರ್‌. ಶೆಟ್ಟಿ , ಉಪ ಕಾರ್ಯಾಧ್ಯಕ್ಷ ನಿತ್ಯಾನಂದ ಹೆಗ್ಡೆ , ಕಾರ್ಯದರ್ಶಿ ಹರೀಶ್‌ ವಾಸು ಶೆಟ್ಟಿ , ಕೋಶಾಧಿಕಾರಿ ಸಿಎ ಹರೀಶ್‌ ಡಿ. ಶೆಟ್ಟಿ , ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ , ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಸಿಎ ಐ. ಆರ್‌. ಶೆಟ್ಟಿ ,

ಉಪ ಕಾರ್ಯಾಧ್ಯಕ್ಷ ಕಿಶೋರ್‌ ಕುಮಾರ್‌ ಕುತ್ಯಾರ್‌, ಉನ್ನತ ಶಿಕ್ಷಣ ಸಮಿತಿಯ ನಿಕಟಪೂರ್ವ ಕಾರ್ಯದರ್ಶಿ ಭಾಸ್ಕರ್‌ ಶೆಟ್ಟಿ ಕಾರ್ನಾಡ್‌ ಪಾಲ್ಗೊಂಡಿದ್ದರು.

ಪೊವಾಯಿ ಶಿಕ್ಷಣ ಸಂಸ್ಥೆಯ ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ರಾಜೇಂದ್ರ ಶೆಟ್ಟಿ ಮುಂಡ್ಕೂರು, ಅಂಧೇರಿ-ಬಾಂದ್ರಾ ಸಮಿತಿಯ ಕಾರ್ಯಾಧ್ಯಕ್ಷ ಎಂ. ಜಿ. ಶೆಟ್ಟಿ , ಸಂಘದ ಪ್ರಾಪರ್ಟಿ ಡೆವಲಪ್‌ಮೆಂಟ್‌ ಸಮಿತಿಯ ಕಾರ್ಯಾಧ್ಯಕ್ಷ ವಿಟ್ಠಲ್‌ ಎಸ್‌. ಆಳ್ವ , ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ ,

ಅಪ್ಪಣ್ಣ ಶೆಟ್ಟಿ ಪೊವಾಯಿ, ಉದಯ್‌ ಶೆಟ್ಟಿ  ವುಡ್‌ಲ್ಯಾಂಡ್‌, ಪೊವಾಯಿ ಶಿಕ್ಷಣ ಸಮಿತಿಯ ಸಲಹೆಗಾರರು, ಶಿಕ್ಷಕವೃಂದ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

 

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ  ಮುಂಡ್ಕೂರು

Advertisement

Udayavani is now on Telegram. Click here to join our channel and stay updated with the latest news.

Next