ಚಿಕ್ಕಮಗಳೂರು: ಅಬ್ಬುಗುಡಿಗೆ-ಕಲ್ಲುಗೋಡು ಗ್ರಾಮದ ನಡುವೆ ಸಂಪರ್ಕ ಕಲ್ಪಿಸುವ ಕಿರು ಸೇತುವೆಯೊಂದು ಮಳೆಯ ಅಬ್ಬರಕ್ಕೆ ಕೊಚ್ಚಿ ಹೋಗಿದೆ. ಇದರಿಂದ ಗ್ರಾಮಗಳ ನಡುವೆ ಸಂಪರ್ಕ ಕಡಿತವಾಗಿದೆ.
ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದ ಕಿರು ಸೇತುವೆ ಇದಾಗಿದ್ದು, ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ.
ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಹೊರನಾಡಿನಿಂದ ಗೀ ಗ್ರಾಮಕ್ಕೆ ತೆರೆಳುವ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ಮರಕ್ಕೆ ಢಿಕ್ಕಿ ಹೊಡೆದ ಕಾರು, ಇಬ್ಬರು ರೈತ ಮುಖಂಡರ ಸಾವು
ಕಳಸ ತಾಲೂಕಿನ ಹೊರನಾಡಿನಿಂದ ಗೀ ಗ್ರಾಮಕ್ಕೆ ತೆರಳುವ ರಸ್ತೆ ಪಕ್ಕದಲ್ಲೇ ಭೂ ಕುಸಿತವಾಗಿದೆ. ಇದರಿಂದ ಆತಂಕದಲ್ಲಿ ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ.
ಮಲೆನಾಡಿನಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ. ಹಳ್ಳಕೊಳ್ಳಗಳು ಉಕ್ಕಿಹರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.