Advertisement

ನೂತನ ಕೈಗಾರಿಕಾ ನೀತಿಯಲ್ಲಿ ಸಣ್ಣ ಕೈಗಾರಿಕೆಗೆ ಆದ್ಯತೆ: ಶೆಟ್ಟರ್‌

11:25 PM Sep 09, 2019 | Lakshmi GovindaRaju |

ಹುಬ್ಬಳ್ಳಿ: ನೂತನ ಕೈಗಾರಿಕಾ ನೀತಿಯಲ್ಲಿ ಸಣ್ಣ ಕೈಗಾರಿಕೆಗಳು ಹಾಗೂ ಎರಡನೇ ಹಂತದ ನಗರಗಳಲ್ಲಿ ಕೈಗಾರಿಕಾ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, 2014-19 ಕೈಗಾರಿಕಾ ನೀತಿ ನವೆಂಬರ್‌ಗೆ ಮುಕ್ತಾಯವಾಗಲಿದ್ದು, ನೂತನ ಕೈಗಾರಿಕಾ ನೀತಿ 2019-24ರವರೆಗೆ ಜಾರಿಗೊಳ್ಳಲಿದೆ.

Advertisement

ನೂತನ ಕೈಗಾರಿಕಾ ನೀತಿ ಮಾದರಿಯಾಗುವ ನಿಟ್ಟಿನಲ್ಲಿ ಸಾರ್ವಜನಿಕರು, ಉದ್ಯಮಿಗಳು, ಸಂಘ-ಸಂಸ್ಥೆಗಳ ಸಲಹೆ ಪಡೆಯಲಾಗುವುದು. ಬೆಂಗಳೂರು ಕೇಂದ್ರೀಕೃತ ಕೈಗಾರಿಕಾ ಸ್ಥಿತಿ ಹೋಗಲಾಡಿಸಲು ಎರಡನೇ ಹಂತದ ನಗರಗಳಲ್ಲಿ ಕೈಗಾರಿಕಾ ಉತ್ತೇಜನಕ್ಕೆ ನೂತನ ನೀತಿಯಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು ಎಂದರು. ಆರ್ಥಿಕ ಹಿಂಜರಿತ ಕೇವಲ ರಾಜ್ಯ-ದೇಶಕ್ಕೆ ಸೀಮಿತವಾಗಿಲ್ಲ.

ಜಾಗತಿಕವಾಗಿ ಇದು ಪರಿಣಾಮ ಬೀರಿದೆ. ಆರ್ಥಿಕ ಹಿಂಜರಿಕೆ ಇಡೀ ಕೈಗಾರಿಕಾ ವಲಯದ ಮೇಲೆ ಪರಿಣಾಮ ಬೀರಿಲ್ಲ. ಆಟೋಮೊಬೈಲ್‌, ರಿಯಲ್‌ ಎಸ್ಟೇಟ್‌ನಂತಹ ಕೆಲವು ವಲಯಗಳ ಮೇಲೆ ಮಾತ್ರ ಪರಿಣಾಮ ಬೀರಿದೆ. ಇದು ತಾತ್ಕಾಲಿಕವಾಗಿದ್ದು, ಮುಂದಿನ ದಿನಗಳಲಿ ಸರಿ ಹೋಗಲಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಈಗಾಗಲೇ ಹಲವು ಕ್ರಮ ಕೈಗೊಂಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next