Advertisement
ವಿದ್ಯುತ್ ದರ ಏರಿಕೆಯಾಗಿರುವುದನ್ನು ಕಡಿಮೆಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಉಪ ತಹಶೀಲ್ದಾರ್ ರಾಘವೇಂದ್ರ ಪೂಜೇರಿಯವರ ಮೂಲಕ ನೀಡಲಾಯ್ತು. ಮನವಿಯಲ್ಲಿ ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಿ ಸುಧಾರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ವಿದ್ಯುತ್ ದರವನ್ನು ದುಪ್ಪಟ್ಟು ಏರಿಕೆ ಮಾಡಿರುವುದರಿಂದ ಸಣ್ಣ ಕೈಗಾರಿಕೆಗಳನ್ನು ನಡೆಸಲು ಕಷ್ಟವಾಗತೊಡಗಿದೆ. ಸಣ್ಣ ಕೈಗಾರಿಕೆಗಳನ್ನು ನಂಬಿರುವ ನಗರದ ಸಾವಿರಾರೂ ಕಾಮರ್ಿಕರ ಬದುಕು ಬೀದಿಗೆ ಬೀಳುವ ಸಾಧ್ಯತೆಯಿದೆ. ಕಾರ್ಮಿಕರು ಮತ್ತು ಸಣ್ಣ ಕೈಗಾರಿಕೋದ್ಯಮಿಗಳ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ವಿದ್ಯುತ್ ದರವನ್ನು ಕಡಿಮೆ ಮಾಡಬೇಕು. ಇಲ್ಲವಾದಲ್ಲಿ ಸಣ್ಣ ಕೈಗಾರಿಕೆಗಳು ಸ್ಥಗಿತಗೊಂಡು ಕಾರ್ಮಿಕರ ಬದುಕು ಅತಂತ್ರವಾಗಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.
Advertisement
Dandeli ವಿದ್ಯುತ್ ಬಿಲ್ ಏರಿಕೆಯ ವಿರುದ್ಧ ಸಣ್ಣ ಕೈಗಾರಿಕೋದ್ಯಮಿಗಳ ಪ್ರತಿಭಟನೆ
10:19 PM Jun 22, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.