Advertisement

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

12:36 PM Jun 01, 2023 | Team Udayavani |

ಚಾಮರಾಜನಗರ: ತಾಲೂಕಿನ ಭೋಗಾಪುರ ಗ್ರಾಮದ ಬಳಿ ಸಣ್ಣ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ.

Advertisement

ಗುರುವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ವಿಮಾನ ಪತನವಾಗಿದೆ. ವಿಮಾನದಲ್ಲಿ ಇಬ್ಬರು ಪೈಲಟ್ ಗಳು ಇದ್ದು ಅವರು ಪ್ಯಾರಾಚೂಟ್ ಮೂಲಕ ಪಾರಾಗಿದ್ದಾರೆ.

ಇದನ್ನೂ ಓದಿ:Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

ಪತನವಾದ ವಿಮಾನದ ಅವಶೇಷ ನೋಡಲು ಅಕ್ಕ ಪಕ್ಕದ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದಾರೆ.

Advertisement

ಇದು ಯಾವ ವಿಮಾನ? ಎಲ್ಲಿಂದ ಎಲ್ಲಿಗೆ ಹೋಗುತ್ತಿತ್ತು? ಎಂಬ ವಿವರಗಳು ಇನ್ನೂ ಲಭ್ಯವಾಗಿಲ್ಲ.

ಈ ಘಟನೆಯು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next