ಕೊಲಂಬಿಯಾ : ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಲಘು ವಿಮಾನವೊಂದು ಸೋಮವಾರ ಕೊಲಂಬಿಯಾದ ಎರಡನೇ ಅತಿದೊಡ್ಡ ನಗರ ಮೆಡೆಲಿನ್‌ನ ವಸತಿ ಪ್ರದೇಶದಲ್ಲಿ ಪತನಗೊಂಡು ವಿಮಾನದಲ್ಲಿದ್ದ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನವು ಬೆಳಿಗ್ಗೆ ಒಲಯಾ ಹೆರೆರಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಎಂಜಿನ್ ನಲ್ಲಿ ಕಪ್ಪು ಹೊಗೆ ಕಾಣಿಸಿಕೊಂಡು ವಸತಿ ಪ್ರದೇಶದ ಮೇಲೆ ಪತನಗೊಂಡಿದೆ.
ವಿಮಾನದಲ್ಲಿದ್ದ ಪೈಲೆಟ್ ಸೇರಿ ಒಟ್ಟು ಎಂಟು ಮಂದಿ ಇದ್ದರು ಎನ್ನಲಾಗಿದೆ. ವಿಮಾನಯಾನ ಸಂಸ್ಥೆ ತಮ್ಮ ಟ್ವಿಟರ್ ನಲ್ಲಿ ತಿಳಿಸಿದೆ.
ವಿಮಾನ ಬಿದ್ದ ಸ್ಥಳದಲ್ಲಿ ಏನಾದರು ಅನಾಹುತ ಸಂಭವಿಸಿದೆಯೇ ಎಂದು ಇನ್ನಷ್ಟೇ ತಿಳಿದುಬರಬೇಕಾಗಿದೆ.
Related Articles