Advertisement

ದಿಢೀರ್ ಹೆದ್ದಾರಿಯಲ್ಲಿ ಇಳಿದು ಕಾರಿಗೆ ಡಿಕ್ಕಿ ಹೊಡೆದ ಲಘು ವಿಮಾನ

09:26 AM Sep 14, 2019 | Nagendra Trasi |

ವಾಷಿಂಗ್ಟನ್: ಲಘು ವಿಮಾನ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ರಸ್ತೆಗೆ ಬಂದು ಬಡಿದ ಪರಿಣಾಮ ರಸ್ತೆಯಲ್ಲಿ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಅಮೆರಿಕದ ಮೇರಿಲ್ಯಾಂಡ್ ನ ಬೋವೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Advertisement

ಕಾರಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಇಬ್ಬರು ಗಾಯಗೊಂಡಿರುವುದಾಗಿ ಪ್ರಿನ್ಸ್ ಜಾರ್ಜ್ಸ್ ಕೌಂಟಿಯ ಅಗ್ನಿಶಾಮಕ ದಳದ ವಕ್ತಾರ ಮಾರ್ಕ್ ಎ ಬ್ರಾಡೈ ತಿಳಿಸಿದ್ದಾರೆ.

ಬೋವೈ ವಿಮಾನ ನಿಲ್ದಾಣದ ಸಮೀಪವೇ ಈ ಘಟನೆ ನಡೆದಿದೆ. ಕಾರಿನೊಳಗಿದ್ದ ಇಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನದಲ್ಲಿದ್ದ ಪೈಲಟ್ ಹಾಗೂ ಓರ್ವ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿ ತಿಳಿಸಿದೆ. ಲಘು ವಿಮಾನ ಯಾವ ಕಾರಣದಿಂದ ರಸ್ತೆ ಬಂದು ಡಿಕ್ಕಿ ಹೊಡೆದಿದೆ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next