Advertisement

Smart city; ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿ: ಡಿಸಿ

12:56 AM Jan 10, 2024 | Team Udayavani |

ಮಂಗಳೂರು: ಸ್ಮಾರ್ಟ್‌ ಸಿಟಿ ಯೋಜನೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಯೋಜನೆಗಳನ್ನು ತ್ವರಿತಗೊಳಿಸಿ ಪೂರ್ಣಗೊಳಿಸಲು ಅವರು ಸಲಹೆ ನೀಡಿದರು .

Advertisement

ಕದ್ರಿ ಪಾರ್ಕ್‌ ಅಭಿವೃದ್ಧಿಯ ಕುರಿತು ಚರ್ಚಿಸಲಾಗಿದ್ದು ಅಲ್ಲಿ ನಿರ್ಮಿಸಲಾದ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ತಿದೆ, ಫುಡ್‌ ಕೋರ್ಟ್‌ಗಳಿಗೆ ಪ್ರತ್ಯೇಕ ಘಟಕವನ್ನು ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಕದ್ರಿ ಉದ್ಯಾನವನ, ಜಿಂಕೆವನ, ಪಾರ್ಕ್‌ ರಸ್ತೆ ಗಳನ್ನು ಏಕೀಕೃತವಾಗಿ ನಿರ್ವಹಣೆ ಮಾಡಲು ಗುತ್ತಿಗೆ ನೀಡುವ ಬಗ್ಗೆ ಪರಿಶೀಲಿಸಲು ಡಿಸಿ ಸೂಚಿಸಿದರು.

ಮೀನುಗಾರಿಕಾ ಕಾಲೇಜಿನಲ್ಲಿ ನಿರ್ಮಿಸಲಾದ ಕೌಶಲ ತರಬೇತಿ ಕೇಂದ್ರದಲ್ಲಿ ಕೌಶಲ ಅಭಿವೃದ್ಧಿ ತರಬೇತಿಗಳನ್ನು ಫೆಬ್ರವರಿಯಿಂದ ಆರಂಭಿಸಲು ಈಗಾಗಲೇ ವೇಳಾಪಟ್ಟಿ ತಯಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಜಲಾಭಿಮುಖ ರಸ್ತೆ ನಿರ್ಮಾಣದಲ್ಲಿ ಜಮೀನು ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಬಂದರು ಇಲಾಖೆಯ ಭೂಮಿಯನ್ನು ಹಸ್ತಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಎಮ್ಮೆಕೆರೆ ಈಜುಕೊಳವನ್ನು ಈಜು ಫೆಡರೇಶನ್‌, ಅಕಾಡೆಮಿ ಗಳಿಗೆ ಕಾರ್ಯಕ್ರಮಗಳನ್ನು ಆಯೋಜಿಸುವ ಜವಾಬ್ದಾರಿ ನೀಡಿ ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.

Advertisement

ಸ್ಮಾರ್ಟ್‌ ಸಿಟಿ ವತಿಯಿಂದ ನಗರದಲ್ಲಿ ರಾಷ್ಟ್ರ ಧ್ವಜಸ್ತಂಭ ನಿರ್ಮಾಣ ಸಂಬಂಧ ಸೂಕ್ತ ಸ್ಥಳ ಅಂತಿಮಗೊಳಿಸಿ ಸರಿಯಾದ ಯೋಜನೆಯನ್ನು ರೂಪಿಸಿ ಮುಂದುವರಿಯಬೇಕು, ಈಗಾಗಲೇ ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಕೈಗೊಂಡು ಐದು ವರ್ಷಗಳು ಕಳೆದಿವೆ. ಕೆಲಸಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಅವರು ಸೂಚಿಸಿದರು.

ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿ, ಆಯುಕ್ತ ಆನಂದ್‌, ಸ್ಮಾರ್ಟ್‌ ಸಿಟಿ ಜನರಲ್‌ ಮ್ಯಾನೇಜರ್‌ ಅರುಣ ಪ್ರಭ ಮತ್ತಿತರರು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next