Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ಸ್ಮಾರ್ಟ್‌ಸಿಟಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ಮಾರ್ಟ್‌ಸಿಟಿ ಯೋಜನೆಯ ಕಾಮಗಾರಿಗಳು ಚೆನ್ನಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲಿ ಕಾಮಗಾರಿಗಳು ವಿಳಂಬ ಆಗುತ್ತಿವೆಯೋ ಅವುಗಳ ಬಗ್ಗೆ ಗಮನಹರಿಸಬೇಕು. ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಒಮ್ಮೆ ಮಾಡಿದ ಕೆಲಸ ಪದೇ ಪದೇ ಮಾಡುವಂತಾಗಬಾರದು ಎಂದರು.
Related Articles
Advertisement
ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಈ ಕೇಂದ್ರ ನಿರ್ಮಾಣಗೊಂಡಿದೆ. ಆಯಾ ಇಲಾಖೆಯವರು ತಮ್ಮ ಸಿಬ್ಬಂದಿಯನ್ನು ಕೂಡಲೇ ನಿಯೋಜಿಸಬೇಕು. ಅಲ್ಲಿನ ಕಾರ್ಯನಿರ್ವಹಣೆ ಕುರಿತು ತರಬೇತಿ ನೀಡಬೇಕು. ವಾರಕ್ಕೊಮ್ಮೆ ಪ್ರಗತಿ ಪರಿಶೀಲನೆ ನಡೆಸಬೇಕು. ತಮ್ಮ ಇಲಾಖೆಯ ಕಾರ್ಯ ಬಹಳ ಸುಲಭವಾಗಲಿದೆ ಎಂದು ಹೇಳಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮಾತನಾಡಿ, ನನ್ನ ಕ್ಷೇತ್ರವೂ ನಗರ ವ್ಯಾಪ್ತಿಗೆ ಸ್ವಲ್ಪ ಪ್ರಮಾಣದಲ್ಲಿ ಹೊಂದಿಕೊಂಡಿದೆ. ಅದರಂತೆ ಕೆಲವು ಕಾಮಗಾರಿಗೆ ಚಾಲನೆ ಸಿಕ್ಕಿದೆ. ಇನ್ನುಳಿದಂತೆ ಬೇರೆ ಬೇರೆ ಕಾಮಗಾರಿಗಳನ್ನು ಬೇಗ ಆರಂಭಿಸಬೇಕು. ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಇರುವ ಕೆಲಸ ನಿರ್ವಹಿಸಿ ಸ್ಮಾರ್ಟ್ ಮಾಡಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದರು.
ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಮಾತನಾಡಿ, ನಗರದಲ್ಲಿ ಬಿಡಾಡಿ ದನಗಳ ಪುನರ್ವಸತಿಗೆ ಕ್ರಮ ಕೈಗೊಂಡ ಯೋಜನೆಯಡಿ ಬೀದಿ ನಾಯಿಗಳ ಪುನರ್ವಸತಿಗೂ ಕ್ರಮ ಕೈಗೊಳ್ಳಬೇಕು. ಬೀದಿ ನಾಯಿ ಹಾವಳಿಯಿಂದ ಜನರು ರೋಸಿ ಹೋಗಿದ್ದಾರೆ. ಈ ಬಗ್ಗೆ ಗಮನಹರಿಸಬೇಕು ಎಂದರು.
ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮಾತನಾಡಿ, ನಗರದಲ್ಲಿ ಅನೇಕ ಕಡೆಗಳಲ್ಲಿ ಸ್ಮಾರ್ಟ್ ರಸ್ತೆ ನಿರ್ಮಾಣ ಕಾರ್ಯ ನಡೆದಿದೆ. ಯೋಜನೆಯಡಿ ಸದ್ಯ ಪೂರ್ಣಗೊಂಡ ರಸ್ತೆಗಳ ಪಕ್ಕದಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶ ಒದಗಿಸಬೇಕು. ರಸ್ತೆ ಬದಿ ವ್ಯಾಪಾರಿಗಳು ಬಾರದಂತೆ ನೋಡಿಕೊಳ್ಳಬೇಕು. ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದರು.
ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ, ಮಾತನಾಡಿ, ಈಗಾಗಲೇ ಕೆಲವೊಂದು ಕಡೆಗಳಲ್ಲಿ ಹೊಸದಾಗಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಆದರೆ ಇನ್ನೂ ಅನೇಕ ಕಡೆಗೆ ಬಸ್‌ಗಳು ನಿಲ್ಲುತ್ತಿಲ್ಲ. ಹೀಗಾಗಿ ಪ್ರಯಾಣಿಕರಿಗೆ ಅನುಕೂಲವಾಗುತ್ತಿಲ್ಲ ಎಂದು ತಿಳಿಸಿದರು. ಇದಕ್ಕೆ ಸ್ಪಂದಿಸಿದ ಸಚಿವ ಸುರೇಶ ಅಂಗಡಿ, ಕೂಡಲೇ ಸಂಬಂಧಿಸಿದವರ ಸಭೆ ಕರೆದು ನಿರ್ದೇಶನ ನೀಡಬೇಕು ಎಂದು ಸೂಚಿಸಿದರು.
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಬುಡಾ ಅಧ್ಯಕ್ಷ ಘೂಳೆಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.