Advertisement

ಸ್ಮಾರ್ಟ್‌ ಸಿಟಿ ತ್ವರಿತ ಅನುಷ್ಠಾನಕ್ಕಾಗಿ ಜನಪ್ರತಿನಿಧಿಗಳ ಸಭೆ; ಸಚಿವ ಬೈರತಿ

09:22 AM Mar 11, 2020 | sudhir |

ಬೆಂಗಳೂರು: ಕೇಂದ್ರದ ಬಹುನಿರೀಕ್ಷಿತ “ಸ್ಮಾರ್ಟ್‌ ಸಿಟಿ’ಯ ತ್ವರಿತ ಮತ್ತು ವ್ಯವಸ್ಥಿತ ಅನುಷ್ಠಾನಕ್ಕಾಗಿ ತಿಂಗಳಲ್ಲಿ ಯೋಜನೆಗೆ ಸಂಬಂಧಿಸಿದ ವಿವಿಧ ನಗರಗಳನ್ನು ಪ್ರತಿನಿಧಿಸುತ್ತಿರುವ ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರ ಸಭೆ ಕರೆಯಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.

Advertisement

ಮೇಲ್ಮನೆಯಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ ಸದಸ್ಯ ಐವನ್‌ ಡಿ’ಸೋಜಾ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಉದ್ದೇಶಿತ ಯೋಜನೆಗೆ ಮಂಗಳೂರು ಸಹಿತ ರಾಜ್ಯದ ಏಳು ನಗರಗಳನ್ನು ಆಯ್ಕೆ ಮಾಡಲಾಗಿದೆ. ಆ ನಗರಗಳಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಇದೆ. ಇದರ ಜತೆಗೆ ಯೋಜನೆಯನ್ನು ಮತ್ತಷ್ಟು ವ್ಯವಸ್ಥಿತವಾಗಿ ಹಾಗೂ ತ್ವರಿತವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಸಂಬಂಧಪಟ್ಟ ನಗರಗಳ ಜನಪ್ರತಿನಿಧಿಗಳೊಂದಿಗೆ ತಿಂಗಳಲ್ಲಿ ಸಭೆ ಕರೆಯಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next