Advertisement
ಘನತ್ಯಾಜ್ಯ ನಿರ್ವಹಣೆ, ವಾರ್ಡ್ ಕಮಿಟಿ ರಚನೆ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠಕ್ಕೆ ಪಾಲಿಕೆ ಈ ಮಾಹಿತಿ ನೀಡಿತು.
Related Articles
Advertisement
ತ್ಯಾಜ್ಯ ಸಂಸ್ಕರಣ ಘಟಗಳಲ್ಲಿ, ತ್ಯಾಜ್ಯ ವಿಲೇವಾರಿ, ತಾಂತ್ರಿಕ ಅಳವಡಿಕೆ ಸೇರಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿದ್ದು ವರದಿ ನೀಡುವಂತೆ ಕರ್ನಾಟಕ ಸಾವಯವ ಗೊಬ್ಬರ ಅಭಿವೃದ್ಧಿ ನಿಗಮ (ಕೆಸಿಡಿಸಿ) ವ್ಯವಸ್ಥಾಪಕ ನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶಿಸಿ ಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿತು.
ತಾಂತ್ರಿಕ ಸಲಹಾ ಸಮಿತಿ ರಚನೆ: ಪಾಲಿಕೆ ವ್ಯಾಪ್ತಿಯ ಏಳು ತ್ಯಾಜ್ಯ ಸಂಸ್ಕರಣಾ ಘಟಕಗಳ ಸಮರ್ಪಕ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ಶಿಫಾರಸುಗಳನ್ನು ನೀಡುವ ಸಲುವಾಗಿ ತಜ್ಞರನ್ನೊಳಗೊಂಡ “ತಾಂತ್ರಿಕ ಸಲಹಾ ಸಮಿತಿ’ ರಚಿಸಲಾಗಿದೆ ಎಂದು ರಾಜ್ಯಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಹೈಕೋರ್ಟ್ ಸೂಚನೆ ಮೇರೆಗೆ ರಾಜ್ಯಸರ್ಕಾರ ಮೇ 16ರಂದು ತಾಂತ್ರಿಕ ಸಲಹಾ ಸಮಿತಿ ರಚಿಸಿದೆ ಎಂದು ಸರ್ಕಾರದ ಪರ ವಕೀಲರು ಮೆಮೊ ಸಲ್ಲಿಸಿದರು. ಸಾರ್ವಜನಿಕ ಹಿತ ಹಾಗೂ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕಸ ಸಂಸ್ಕರಣಾ ಘಟಕಗಳು ವೈಜಾನಿಕವಾಗಿ ಮತ್ತು ಯಾವುದೇ ಲೋಪವಿಲ್ಲದೆ ಕಾರ್ಯನಿರ್ವಹಿಸಬೇಕಿದೆ.
ಆದ್ದರಿಂದ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ತಾಂತ್ರಿಕ ಅಳವಡಿಕೆ ಸೇರಿದಂತೆ ಇನ್ನಿತರೆ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಅಗತ್ಯ ಶಿಫಾರಸುಗಳನ್ನು ನೀಡುವ ಸಲುವಾಗಿ ಐಐಎಸ್ಸಿ, ಪರಿಸರ ವಿಜ್ಞಾನಿಗಳು, ಕೃಷಿ ವಿ.ವಿ ತಜ್ಞರು, ಮಾಲಿನ್ಯ ನಿಯಂತ್ರಣ ಮಂಡಳಿ, ವಿವಿಧ ಕ್ಷೇತ್ರಗಳ ತಜ್ಞರನ್ನೊಳಗೊಂಡತೆ ಕನಿಷ್ಟ 8 ಸದಸ್ಯರ ಉನ್ನತ ಮಟ್ಟದ “ತಾಂತ್ರಿಕ ಸಲಹಾ ಸಮಿತಿಯನ್ನು’ ರಚಿಸುವಂತೆ ಹೈಕೋರ್ಟ್ ಸೂಚಿಸಿತ್ತು.