ಬೆಂಗಳೂರು: ನಗರದ ಕೆ.ಆರ್.ಮಾರುಕಟ್ಟೆ ಜಂಕ್ಷನ್ ಅನ್ನು ಸ್ಮಾರ್ಟ್‌ಸಿಟಿ ಯೋಜನೆಯ ಭಾಗವಾಗಿ ಅಂದಾಜು 1.20 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದರು.
ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಸೋಮವಾರ ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಮೇಯರ್ ಎಂ.ಗೌತಮ್ ಕುಮಾರ್ ಅಧ್ಯಕ್ಷತೆಯಲ್ಲಿ ನಗರ ಮಟ್ಟದ ಸಲಹಾ ವೇದಿಕೆ ಸಭೆ ನಡೆಯಿತು. ಈ ಸಂಬಂಧ ಪ್ರತಿಕ್ರಿಯಿಸಿದ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಚರ್ಚೆಯಾಗಿದೆ.
ಮುಖ್ಯವಾಗಿ ಕೆ.ಆರ್. ಮಾರುಕಟ್ಟೆ ಜಂಕ್ಷನ್ ಅಭಿವೃದ್ಧಿ, ವಿಕ್ಟೋರಿಯಾ ಆಸ್ಪತ್ರೆಗೆ ಬರುವವರ ಅನುಕೂಲಕ್ಕೆ ಎತ್ತರಿಸಿದ ಪಾದಚಾರಿ ಮಾರ್ಗಕ್ಕೆ ಸಂಬಂಧ ನೀಲ ನಕ್ಷೆ ತಯಾರಿಸಿಕೊಳ್ಳಲಾಗಿದೆ ಎಂದರು. ಕೆ.ಆರ್.ಮಾರುಕಟ್ಟೆಯಲ್ಲಿ ಭಾಗದಲ್ಲಿ ಕಸ ನಿರ್ವಹಣೆ, ವಾಹನಗಳ ನಿಲ್ದಾಣ ವ್ಯವಸ್ಥೆ, ಈ ಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ ಅಭಿವೃದ್ಧಿ ಹಾಗೂ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು.
ಈಗಾಗಲೇ ಸ್ಥಳ ಪರಿಶೀಲನೆ ಮಾಡಲಾಗಿದ್ದು, ನೀಲ ನಕ್ಷೆ ಸಿದಟಛಿಪಡಿಸಿಕೊಳ್ಳಲಾಗಿದೆ. ಈ ಭಾಗದಲ್ಲಿರುವ ಖಾಲಿ ಜಾಗಗಳನ್ನು ಬಳಸಿಕೊಳ್ಳಲಾಗುವುದು. ಕೆ.ಆರ್. ಮಾರುಕಟ್ಟೆಯನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ. ಸದ್ಯ ಜಂಕ್ಷನ್ ಅಭಿವೃದ್ಧಿ ಯೋಜನೆ ಸ್ಮಾರ್ಟ್‌ಸಿಟಿ ಯೋಜನೆಯ ಭಾಗವಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಮೇಯರ್ ಎಂ. ಗೌತಮ್ ಕುಮಾರ್, ಸಂಸದ ಪಿ.ಸಿ ಮೋಹನ್, ಶಾಸಕರಾದ ದಿನೇಶ್ ಗುಂಡುರಾವ್, ಬಿ.ಝೆಡ್ ಜಮೀರ್ ಅಹ್ಮದ್‌ಖಾನ್, ರಿಜ್ವಾನ್ ಹರ್ಷದ್ ಮುಖ್ಯ ಅಭಿಯಂತರರು ಸ್ಮಾರ್ಟ್ ಸಿಟಿ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.