Advertisement

ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ

12:22 PM Sep 01, 2020 | Suhan S |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್‌ ಸಿಟಿ ಅಡಿ ಕೈಗೆತ್ತಿಕೊಂಡಿರುವ ಟೆಂಡರ್‌ ಶ್ಯೂರ್‌ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಗಿಸದಿದ್ದರೆ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದಾರೆ.

Advertisement

ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆಯುತ್ತಿರುವ ಟೆಂಡರ್‌ ಶ್ಯೂರ್‌ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆನಡೆಸಿ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಸಿಡಿಯಡಿ ಟೆಂಡರ್‌ ಶ್ಯೂರ್‌ ಮಾದರಿಯಲ್ಲಿ 13 ಪ್ಯಾಕೇಜ್‌ ಗಳಲ್ಲಿ 36 ರಸ್ತೆ ಕಾಮಗಾರಿ ನಡೆಯುತ್ತಿದ್ದು, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರಿಗೆ ದಂಡ ವಿಧಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

36 ರಸ್ತೆಗಳ ಕಾಮಗಾರಿ ಪೈಕಿ ಎರಡು ವಾರಕ್ಕೊಮ್ಮೆ ಪರಿಶೀಲನಾ ಸಭೆ ನಡೆಸಿ ಕಾಮಗಾರಿ ಪ್ರಗತಿಯ ಮಾಹಿತಿ ಪಡೆಯುವಂತೆ ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಪ್ರತಿ ತಿಂಗಳು ಕಾಮಗಾರಿ ಎಷ್ಟು ಪ್ರಗತಿ ಆಗಿದೆ ಎಂದು ಮಾಹಿತಿ ಪಡೆದುಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದರು. ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ನಗರ ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

………………………………………………………………………………………………………………………………………………………

ಕೆಂಪೇಗೌಡ ಜಯಂತಿ ಮುಂದೂಡಿಕೆ: ಮೇಯರ್‌: ಬೆಂಗಳೂರು: ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಸೆ.2ಕ್ಕೆ ನಿಗದಿ ಮಾಡಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮೇಯರ್‌ ಎಂ.ಗೌತಮ್‌ ಕುಮಾರ್‌ ತಿಳಿಸಿದರು.

Advertisement

ಈ ಕುರಿತು ಮಾತನಾಡಿ, ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರು ದೇಶದ ಆರ್ಥಿಕ ವ್ಯವಸ್ಥೆ ಬಲಪಡಿಸುವಲ್ಲಿ ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ. ಅವರ ಅಗಲಿಕೆಯಿಂದ ದೇಶಕ್ಕೆ ಅಪಾರ ನಷ್ಟವುಂಟಾಗಿದೆ ಎಂದರು. ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಶಸ್ತಿ ಪುರಸ್ಕೃತರ ಆಯ್ಕೆ ಮಾಡುವ ಸಂಬಂಧ ಮೇಯರ್‌ ಎಂ. ಗೌತಮ್‌ಕುಮಾರ್‌ ಅವರ ನೇತೃತ್ವದಲ್ಲಿ ಸೋಮವಾರ ಸಭೆ ಕರೆಯಲಾಗಿತ್ತು. ಆದರೆ, ಪ್ರಣಬ್‌ ಮುಖರ್ಜಿ ಅವರ ನಿಧನ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ.

ಸೆ.3,4 ಅಥವಾ ಸೆ.6ಕ್ಕೆ ಕೆಂಪೇಗೌಡ ಜಯಂತಿ ಆಚರಣೆ ಮಾಡುವ ಸಾಧ್ಯತೆ ಇದೆ. ಇದೇ ಸೆ.10ಕ್ಕೆ ಎಲ್ಲ ಪಾಲಿಕೆ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಇದರ ಒಳಗಾಗಿ ಕೆಂಪೇಗೌಡ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಸೆ.3 ಅಥವಾ 4ಕ್ಕೆ ದಿನಾಂಕ ನಿಗದಿಯಾಗದೆ ಇದ್ದರೆ, ಸೆ.5ಕ್ಕೆ ಕೊನೆಯ ಕೌನ್ಸಿಲ್‌ ಸಭೆ ಬಳಿಕ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next