Advertisement

ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌: ಪರಿಶೀಲನೆ

09:50 PM Jul 10, 2023 | Team Udayavani |

ಬೆಂಗಳೂರು: ಗುಣಮಟ್ಟದ ಸ್ಮಾರ್ಟ್‌ಫೋನ್‌ ಒದಗಿಸುವುದರ ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರ ಹಿಸಿ ಸೋಮವಾರ ರಾಜ್ಯಾ ದ್ಯಂತ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್‌ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದ್ದಾರೆ.

Advertisement

ಸೋಮವಾರ ಪ್ರಶ್ನೋತ್ತರ ವೇಳೆ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ನೀಡಿದ ಸಲಹೆಗೆ ಪ್ರತಿಕ್ರಿಯಿಸಿದ ಸಚಿವರು, ಆಶಾ ಕಾರ್ಯಕರ್ತೆಯರು ಸ್ವಯಂಪ್ರೇರಣೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಮಾಸಿಕ 5 ಸಾವಿರ ರೂ. ಗೌರವಧನ ನೀಡಲಾಗುತ್ತಿದೆ. ಜತೆಗೆ ಅವರು ತಮ್ಮ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ಅದನ್ನು ಆಧರಿಸಿ ಮಾಸಿಕ ಕನಿಷ್ಠ 5ರಿಂದ ಗರಿಷ್ಠ 8 ಸಾವಿರ ರೂ. ಬರುತ್ತದೆ. ಈ ಮಧ್ಯೆ “ಗೃಹಲಕ್ಷ್ಮೀ’ ಯೋಜನೆ ಅಡಿಯೂ ನಗದು ಬರುವುದರಿಂದ ಮತ್ತೆ 2 ಸಾವಿರ ರೂ. ಸಿಗಲಿದೆ ಎಂದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯಕ್ಕೆ 43,524 ಆಶಾ ಕಾರ್ಯಕರ್ತೆಯರ ಹುದ್ದೆಗಳು ಮಂಜೂರಾಗಿದ್ದು, 41,119 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸಲು ನಿಯಮದಲ್ಲಿ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ತಿಪ್ಪೇಸ್ವಾಮಿ, ಸರಕಾರದ ವಿವಿಧ ಯೋಜನೆಗಳಲ್ಲಿ ಪ್ರಮುಖ ಪಾತ್ರ ವಹಿಸುವ ಈ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ಪಕ್ಷ ಸ್ಮಾರ್ಟ್‌ಫೋನ್‌ ನೀಡಿದರೆ, ಸಮೀಕ್ಷೆ ಮತ್ತಿತರ ಕಾರ್ಯಗಳಿಗೆ ತುಂಬಾ ಅನುಕೂಲ ಆಗುತ್ತದೆ ಎಂದು ಸಲಹೆ ನೀಡಿದರು. ಆಗ ಮಾತನಾಡಿದ ಸಚಿವರು, ಉತ್ತಮ ಸಲಹೆ, ಈ ನಿಟ್ಟಿನಲ್ಲಿ ಪರಿಶೀಲಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next