Advertisement

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌, ಸ್ಕೂಟಿ

07:42 PM Oct 21, 2021 | Team Udayavani |

ಲಕ್ನೋ: ಇತ್ತೀಚೆಗಷ್ಟೇ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಶೇ.40 ಟಿಕೆಟ್‌ಗಳನ್ನು ಮಹಿಳೆಯರಿಗೇ ನೀಡುವುದಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ್ದರು. ಅದರ ಬೆನ್ನಲ್ಲೇ ಇನ್ನೊಂದು ಮಹತ್ವದ ಘೋಷಣೆ ಮಾಡಿದ್ದಾರೆ.

Advertisement

ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, 12ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್‌ಗಳು, ಪದವಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವಿದ್ಯುತ್‌ ಚಾಲಿತ ಸ್ಕೂಟಿಗಳನ್ನು ನೀಡುವುದಾಗಿ ಪ್ರಕಟಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ, ನಾನು ಇತ್ತೀಚೆಗೆ ವಿದ್ಯಾರ್ಥಿನಿಯರನ್ನು ಭೇಟಿಯಾಗಿದ್ದೆ. ಅವರು ತಮ್ಮ ವಿದ್ಯಾಭ್ಯಾಸ ಮತ್ತು ಸುರಕ್ಷತೆಗೆ ಸ್ಮಾರ್ಟ್‌ಫೋನ್‌ ಸಿಕ್ಕಿದರೆ ಬಹಳ ಒಳ್ಳೆಯದು ಎಂದು ಹೇಳಿದ್ದರು. ಆದ್ದರಿಂದ ಪ್ರಣಾಳಿಕೆ ನಿರ್ಧಾರ ಸಮಿತಿಯೊಂದಿಗೆ ಮಾತನಾಡಿ ಅದನ್ನು ಅಂತಿಮಗೊಳಿಸಲಾಗಿದೆ ಎಂದಿದ್ದಾರೆ. ಇದನ್ನು ರಾಜ್ಯದ ಹೆಣ್ಣುಮಕ್ಕಳ ಭದ್ರತೆ ದೃಷ್ಟಿಯಿಂದ ಮಹತ್ವದ ಹೆಜ್ಜೆ ಎಂದು ಕಾಂಗ್ರೆಸ್‌ ವಕ್ತಾರ ಅಂಶು ಅವಸ್ಥಿ ಹೇಳಿದ್ದಾರೆ.

ಇದನ್ನೂ ಓದಿ :ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ರಾಷ್ಟಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ

Advertisement

Udayavani is now on Telegram. Click here to join our channel and stay updated with the latest news.

Next