Advertisement

ಕಾಂಗ್ರೆಸ್‌ ಆಫ‌ರ್‌ ನಿರಾಕರಿಸಿದ ಎಸ್‌ಎಂಕೆ 

07:00 AM Apr 11, 2018 | |

ಬೆಂಗಳೂರು: ವರ್ಷದ ಹಿಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಅಚ್ಚರಿ ಮೂಡಿಸಿದ್ದ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರನ್ನು ಮತ್ತೆ ಮಾತೃ ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆದಿದೆ. ಕೃಷ್ಣ ಅವರು ಬಿಜೆಪಿ ಸೇರಿದ ನಂತರ ಆ ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಹಾಗೂ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರೇ ನೇರವಾಗಿ ಎಸ್‌.ಎಂ. ಕೃಷ್ಣ ಜತೆಗೆ ಮಾತುಕತೆ ನಡೆಸಿದ್ದರು. ಈ ಬೆಳವಣಿಗೆಯ ಬಗ್ಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಮೂಲಕ ರಾಹುಲ್‌ ಗಾಂಧಿ ಗಮನಕ್ಕೂ ತರಲಾಗಿದೆ. ಆದರೆ, ಕಾಂಗ್ರೆಸ್‌ ನಾಯಕರ ಪ್ರಯತ್ನಕ್ಕೆ ಕೃಷ್ಣ  ಯಾವುದೇ ಪ್ರತಿಕ್ರಿಯೆ ನೀಡಿಲ್ಲವೆಂದು ಹೇಳಲಾಗಿದೆ.

Advertisement

ಬಿಜೆಪಿ ನಾಯಕರ ನಿರ್ಲಕ್ಷ್ಯದಿಂದ ತಮ್ಮ ಆಪ್ತರಿಗೆ ಎಲ್ಲಿ ಅವಕಾಶ ಇದೆಯೋ ಆ ಪಕ್ಷದ ಜೊತೆ ಗುರುತಿಸಿ ಕೊಳ್ಳುವಂತೆ ಮುಕ್ತ ಅವಕಾಶ ನೀಡಿದ್ದರು. ಆ ಕಾರಣಕ್ಕಾಗಿಯೇ ಅವರ ಸಹೋದರನ ಪುತ್ರ ಗುರುಚರಣ್‌ ಮಂಡ್ಯದಲ್ಲಿ ಕಾಂಗ್ರೆಸ್‌ ಟಿಕೆಟ್‌
ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ಬೆಳವಣಿಗೆಗಳ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಎಸ್‌.ಎಂ.ಕೃಷ್ಣ, ಬಿಜೆಪಿಯಲ್ಲಿ ತಮ್ಮ ಹಿರಿತನಕ್ಕೆ ತಕ್ಕ ಗೌರವ ದೊರೆತಿದೆ. ಕಾಂಗ್ರೆಸ್‌ ಸೇರುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಕಾಂಗ್ರೆಸ್‌ನ ಯಾವುದೇ ನಾಯಕರ ಜತೆಗೆ ಮಾತುಕತೆ ನಡೆಸಿಲ್ಲವೆಂದು ಸ್ಪಷ್ಟಪಡಿಸಿದರು.

ಈ ಕುರಿತು ಬಿಜೆಪಿ ನಾಯಕ ಆರ್‌.ಅಶೋಕ್‌ ಪ್ರತಿಕ್ರಿಯಿಸಿ, ಎಸ್‌.ಎಂ. ಕೃಷ್ಣ ಕುಟುಂಬದವರಿಗೆ ಯಾವುದೇ ಕ್ಷೇತ್ರದಲ್ಲಿ ಟಿಕೆಟ್‌ ಕೇಳಿದರೂ ಕೊಡಲು ಬಿಜೆಪಿ ಹೈ ಕಮಾಂಡ್‌ ಸಿದ್ಧವಿದೆ. ಅವರ ಕುಟುಂಬದವರು ಚುನಾವಣಾ ರಾಜಕೀಯಕ್ಕೆ ಬರುವ ಆಸಕ್ತಿ ತೋರಿಸಿಲ್ಲ. ಕಾಂಗ್ರೆಸ್‌ನವರಿಗೆ ಈಗ ಎಸ್‌.ಎಂ.ಕೃಷ್ಣ ಶಕ್ತಿ ಗೊತ್ತಾಗಿದೆ. ಆದರೆ, ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌
ಸೇರುವುದಿಲ್ಲ ಎಂದು ಹೇಳಿದರು.

ಮೊಳಕಾಲ್ಮೂರು ಕ್ಷೇತ್ರದಲ್ಲಿ ಭಾವ-ಮೈದುನ ಸ್ಪರ್ಧೆ?
ಬೆಂಗಳೂರು: ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧೆಗೆ ಟಿಕೆಟ್‌ ಪಡೆದಿರುವ ಬಳ್ಳಾರಿ ಸಂಸದ ಶ್ರೀರಾಮುಲು ವಿರುದಟಛಿ ಕಾಂಗ್ರೆಸ್‌ ನಿಂದ ವಿಧಾನ ಪರಿಷತ್‌ ಸದಸ್ಯ ವಿ.ಎಸ್‌.ಉಗ್ರಪ್ಪ ಅವರನ್ನು ಕಣಕ್ಕಿಳಿಸಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ನಾಯಕ ಸಮುದಾಯ ಹೆಚ್ಚಾಗಿರುವ ಕ್ಷೇತ್ರಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಬಿಜೆಪಿಯು ಸಂಸದ ಶ್ರೀರಾಮುಲು ಎಸ್ಟಿ ಮೀಸಲು ಕ್ಷೇತ್ರದಲ್ಲಿ ಸ್ಪರ್ಧೆಗಿಳಿಸಿ ಕಾಂಗ್ರೆಸ್‌ಗೆ ಶಾಕ್‌ ನೀಡಿದೆ. ಇದಕ್ಕೆ ಪ್ರತಿತಂತ್ರ ಹೂಡಲು ವಿ.ಎಸ್‌. ಉಗ್ರಪ್ಪ ಅವರನ್ನೇ ಕಣಕ್ಕಿಳಿಸಿ ಬಿಜೆಪಿಗೆ ತಿರುಗೇಟು ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆಂದು ಹೇಳಲಾಗಿದೆ.

ನಾಯಕ ಸಮುದಾಯದ ಗೋತ್ರಗಳ ಪ್ರಕಾರ ವಿ.ಎಸ್‌. ಉಗ್ರಪ್ಪ ಶ್ರೀರಾಮುಲುವಿಗೆ ಭಾವ ಆಗಲಿದ್ದು, ರಾಮುಲು ಮೈದುನ ಆಗಲಿದ್ದಾರೆ. ಒಂದು ವೇಳೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಉಗ್ರಪ್ಪ ಅವರಿಗೆ ಟಿಕೆಟ್‌ ದೊರೆತರೆ, “ಕೃಷ್ಣಾರ್ಜುನರ ಕಾಳಗ’ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಉಗ್ರಪ್ಪ ಮೊಳಕಾಲ್ಮೂರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಆ ಕ್ಷೇತ್ರದಲ್ಲಿ ಮಾಜಿ ಸಂಸದ ಹಾಗೂ ಚಿತ್ರನಟ ಶಶಿಕುಮಾರ್‌ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರೊಬ್ಬರು ಆಕಾಂಕ್ಷಿಯಾಗಿದ್ದಾರೆ. ಶಶಿಕುಮಾರ್‌ ಅವರಿಗೆ ಮನವೊಲಿಸಿ ಉಗ್ರಪ್ಪ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಿರುವ ಸಿಎಂ ಸಿದ್ದರಾಮಯ್ಯ, ಮೊಳಕಾಲ್ಮೂರು ಕ್ಷೇತ್ರದಲ್ಲಿ ಕೆಲಸ
ಮಾಡುವಂತೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ. ಚಿತ್ರದುರ್ಗ ಲೋಕಸಭೆಯಿಂದ ಉಗ್ರಪ್ಪ ಸ್ಪರ್ಧಿಸಿದಾಗ ಮೊಳಕಾಲ್ಮೂರು ಕ್ಷೇತ್ರದಲ್ಲಿ ಹೆಚ್ಚಿನ ಮತ ದೊರೆತಿದ್ದು, ಅಲ್ಲದೇ ತುಂಗಭದ್ರಾ ಆಣೆಕಟ್ಟೆಯಿಂದ ಮೊಳಕಾಲ್ಮೂರು ಸೇರಿ ಐದು ತಾಲೂಕುಗಳಿಗೆ ಕುಡಿಯುವ ನೀರಿಯ ಯೋಜನೆ ಜಾರಿಗೆ ಹೋರಾಟ ನಡೆಸಿ, ಸುಮಾರು ಎರಡು ಸಾವಿರ ಕೋಟಿ ರೂ. ಯೋಜನೆಯನ್ನು ಜಾರಿಗೊಳಿಸಲು ಪ್ರಯತ್ನಿಸಿದ್ದು, ಸ್ಪರ್ಧೆಗೆ ಅನುಕೂಲವಾಗಲಿದೆ. ಈ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ದಿ ಮಂಡಳಿ ಸ್ಥಾಪನೆ ಹಾಗೂ ತಮ್ಮ ವಿಧಾನ ಪರಿತಷ್‌ ಸದಸ್ಯರ ಅನುದಾನದಲ್ಲಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ಅನುದಾನ ಬಿಡುಗಡೆ ಮಾಡಿ ಅಭಿವೃದಿಟಛಿ ಕಾಮಗಾರಿ ಕೈಗೊಂಡಿರುವುದು ನೆರವಿಗೆ ಬರಲಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆಂದು ಹೇಳಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next