Advertisement

Odisha; ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಾಣಿಸಿಕೊಂಡ ಹೊಗೆ

05:01 PM Jun 06, 2023 | Team Udayavani |

ಒಡಿಶಾ: ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಭೀತಿ ಸೃಷ್ಟಿಸಿದ ಘಟನೆ ಒಡಿಶಾದ ಬ್ರಹ್ಮಪುರ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.

Advertisement

ಬ್ರಹ್ಮಪುರ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಸಿಕಂದರಾಬಾದ್‌ -ಅಗರ್ತಲಾ ಎಕ್ಸ್‌ಪ್ರೆಸ್‌ ರೈಲಿನ ಎಸಿ ಬಿ-5 ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿದೆ.

ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಇಳಿಸಲಾಯಿತು. ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ಪಡೆದ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಹೊಗೆಯನ್ನು ಹತೋಟಿಗೆ ತರಲಾಯಿತು ಬಳಿಕ ರೈಲು ನಿಲ್ದಾಣದಿಂದ ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲು ಹೊರಟಿತು ಎಂದು ಪೂರ್ವ ಕರಾವಳಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂ.​ 2ರಂದು ಒಡಿಶಾದ ಬಾಲಸೋರ್​ನಲ್ಲಿ ರೈಲು ಅಪಘಾತ ಸಂಭವಿಸಿ 278 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡ ನಂತರ ಈ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next