Advertisement

ಧೂಮಪಾನಿಗಳ ಜೇಬಿಗೆ ಹೊಗೆ

09:11 AM Sep 22, 2019 | Team Udayavani |

ಧಾರವಾಡ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ತಂಬಾಕು ತನಿಖಾ ದಳ ದಿಂದ 21ಕ್ಕೂ ಹೆಚ್ಚು ದಿಢೀರ್‌ ದಾಳಿ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ 324 ಜನರ ವಿರುದ್ಧ ಪ್ರಕರಣ ದಾಖಲಿಸಿ 40,840 ರೂ. ದಂಡ ವಿಧಿ ಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಅಧ್ಯಕ್ಷರಾದ ಡಿಸಿ ದೀಪಾ ಚೋಳನ್‌ ಹೇಳಿದರು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದ ತ್ತೈಮಾಸಿಕ ಸಮನ್ವಯ ಸಮಿತಿ ಸಭೆ ಜರುಗಿಸಿ ಅವರು ಮಾತನಾಡಿದರು. 18 ವರ್ಷದೊಳಗಿನ ಅಥವಾ ಅಪ್ರಾಪ್ತ ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಅವರಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುತ್ತಿದ್ದ 188 ಜನರ ವಿರುದ್ಧ ಪ್ರಕರಣ ದಾಖಲಿಸಿ 20,950 ರೂ. ದಂಡ ವಸೂಲಿ ಮಾಡಲಾಗಿದೆ. ಶಿಕ್ಷಣ ಸಂಸ್ಥೆಗಳ ಸುತ್ತ 100 ಮೀಟರ್‌ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ 17 ಪ್ರಕರಣಗಳು ದಾಖಲಾಗಿದೆ. ಈ ಪೈಕಿ 2400 ರೂ. ದಂಡ ವಿಧಿಸಿ ಎಚ್ಚರಿಕೆ ನೋಟಿಸ್‌ ನೀಡಲಾಗಿದೆ ಎಂದರು.

ತಹಶೀಲ್ದಾರ್‌ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ರಚಿಸಿ, ಕೋಟಾ³ ಕಾಯ್ದೆಯ ಅನ್ವಯ ಕಾನೂನು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಬಿಆರ್‌ಟಿಎಸ್‌ ಬಸ್‌ನಿಲ್ದಾಣ, ಪೊಲೀಸ್‌ ಆಯುಕ್ತರ ಕಚೇರಿ, ಸರಕಾರಿ ಕಚೇರಿ, ಶಾಲಾ-ಕಾಲೇಜು ಆವರಣದಲ್ಲಿ ಧೂಮಪಾನ ನಿಷೇಧ ಫಲಕಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರಮುಖ ಸ್ಥಳಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದರು.

ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿ ತಂಬಾಕು ಉತ್ಪನ್ನಗಳ ಉತ್ಪಾದನೆ, ಸರಬರಾಜು ಮತ್ತು ಮಾರಾಟದ ಮೇಲೆ ನಿಯಂತ್ರಣ ಹೇರಲು ಜಾರಿಯಾಗಿರುವ ಕೋಟ್ಪಾ  ಕಾಯ್ದೆ-2003ನ್ನು ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು

Advertisement

Udayavani is now on Telegram. Click here to join our channel and stay updated with the latest news.

Next