Advertisement

ಬಾರ್‌,ಕ್ಲಬ್‌, ಹೊಟೇಲ್‌ಗ‌ಳಲ್ಲಿ ಧೂಮಪಾನ ತಕ್ಷಣದಿಂದ ನಿಷೇಧ

06:00 AM Nov 20, 2018 | |

ಬೆಂಗಳೂರು:  ಮಹಾನಗರ, ನಗರ, ಪಟ್ಟಣ ಪ್ರದೇಶಗಳ ಹೊಟೆಲ್‌, ಬಾರ್‌, ರೆಸ್ಟೊರೆಂಟ್‌, ಕ್ಲಬ್‌ ಹಾಗೂ ಪಬ್‌ಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಸಂಪೂರ್ಣ ಧೂಮಪಾನ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ.

Advertisement

ಕರ್ನಾಟಕ ಧೂಮಪಾನ ನಿಷೇಧ ಹಾಗೂ ಧೂಮಪಾನಿಗಳಲ್ಲದವರ ಆರೊಗ್ಯ ರಕ್ಷಣೆ ಕಾಯ್ದೆ 2001 ರ ಪ್ರಕಾರ ಸೋಮವಾರದಿಂದಲೇ ಈ ನಿಷೇಧ ಹೇರಲಾಗಿದ್ದು, ಈ ಪ್ರದೇಶಗಳಲ್ಲಿ ಯಾವುದೇ ರೀತಿಯ ಧೂಮಪಾನಕ್ಕೆ ಅವಕಾಶ ನೀಡುವಂತಿಲ್ಲ. ಒಂದು ವೇಳೆ, ಧೂಮಪಾನಕ್ಕೆ ಅವಕಾಶ ನೀಡಿದರೆ ಸಂಬಂಧ ಪಟ್ಟ ಹೊಟೆಲ್‌, ಬಾರ್‌, ಕ್ಲಬ್‌ಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು.

ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್‌ ಅವರು ಸೋಮವಾರ ಈ ವಿಷಯವನ್ನು ಪ್ರಕಟಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆಯಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ. ಅಲ್ಲದೇ  ಧೂಮಪಾನದಿಂದ  ಪರೋಕ್ಷ ಧೂಮಪಾನ (ಪ್ಯಾಸೀವ್‌ ಸ್ಮೋಕರ್) ಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರೋಗ್ಯ, ಕಾನೂನು, ಗೃಹ ಇಲಾಖೆ, ಸಮಾಜ ಕಲ್ಯಾಣ, ನಗರ ಸ್ಥಳೀಯ ಸಂಸ್ಥೆಗಳ ಸಹಕಾರ ಅಗತ್ಯವಿದ್ದು, ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸೇರಿ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು,’ ಎಂದರು.

ಕೋಟಾ³ ಕಾಯಿದೆ 2003 ರ ಪ್ರಕಾರ 30 ಕ್ಕೂ ಹೆಚ್ಚು ಆಸನವಿರುವ ಬಾರ್‌,ರೆಸ್ಟೋರೆಂಟ್‌, ಹೋಟೆಲ್‌, ಪಬ್‌, ಕ್ಲಬ್‌ಗಳಲ್ಲಿ ಧೂಮಪಾನ ಪ್ರದೇಶ ಸ್ಥಾಪಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಈ ಕಾನೂನು ತಿದ್ದುಪಡಿ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next