ಗದಗ: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನಗರದಲ್ಲಿ ಗುರುವಾರ ಬೃಹತ್ ರೋಡ್ ಶೋ ನಡೆಸಿದರು.
ನಗರದ ಮುಳಗುಂದ ನಾಕಾದಿಂದ ಆರಂಭವಾದ ರೋಡ್ ಶೋ ರಾಚೋಟೇಶ್ವರ ದೇವಸ್ಥಾನ ರಸ್ತೆ, ಬಸವೇಶ್ವರ ಸರ್ಕಲ್, ಸ್ಟೇಷನ್ ರಸ್ತೆ, ಮಹೇಂದ್ರಕರ್ ಸರ್ಕಲ್ ಮಾರ್ಗವಾಗಿ ಸಾಗಿತು.
ರೋಡ್ ಶೋನಲ್ಲಿ ಸಚಿವರಾದ ಸಿ.ಸಿ. ಪಾಟೀಲ, ಗೋವಿಂದ ಕಾರಜೋಳ, ಸಂಸದ ಶಿವಕುಮಾರ್ ಉದಾಸಿ, ಮುಖಂಡ ಅನಿಲ ಮೆಣಸಿನಕಾಯಿ, ಸೇರಿ ಹಲವಾರು ನಾಯಕರು ಭಾಗಿಯಾಗಿದ್ದರು.
ರೋಡ್ ಶೋನಲ್ಲಿ ನೂರಾರು ಬೈಕ್ ಗಳ ರ್ಯಾಲಿ, ಆಟೋ ರ್ಯಾಲಿ ನಡೆಯಿತು. ಮೆರವಣಿಗೆಯುದ್ದಕ್ಕೂ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಜಯಘೋಷ ಹಾಕುತ್ತ ಸಾಗಿದರು.