ಬೆಂಗಳೂರು: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಜವಳಿ ಸಚಿವೆ ಸ್ಮೃತಿ ಇರಾನಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಪೋಷಣ್ ಅಭಿಯಾನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ್ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರ ಯಾವೆಲ್ಲ ಕಾರ್ಯಕ್ರಮಗಳನ್ನು ಜಾರಿಗೆ ತರಬಹುದು ಮತ್ತು ಹೇಗೆ ಈ ಯೋಜನೆಯನ್ನು ರಾಜ್ಯದಲ್ಲಿ ಯಶಸ್ವಿಗೊಳಿಸಬಹುದು ಅನ್ನೋದರ ಬಗ್ಗೆ ಮಾಹಿತಿ ನೀಡಿದರು.
ಪೋಷಣೆ ಅಭಿಯಾನ ಮಕ್ಕಳ ರಕ್ತಹೀನತೆ ಕಡಿಮೆ ತೂಕ ತೀವ್ರ ಅಪೌಷ್ಟಿಕತೆಯನ್ನು ತಡೆಗಟ್ಟುವ ಯೋಜನೆಯಾಗಿದ್ದು, ಇದಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನಿಡಬೇಕು ಅಷ್ಟೇ ಅಲ್ಲದೆ ಸಾಮಾಜಿಕ ಸಂಸ್ಥೆಗಳು ಸಹ ಈ ಯೋಜನೆ ಕೈಜೊಡಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಬೇಕು ಅಂತ ಹೇಳಿದರು. ಇದರ ಜೊತೆಗೆ ಪೋಷಣೆ ಅಭಿಯಾನ ಕಾರ್ಯಕ್ರಮ ದಲ್ಕಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ಮಾನ್ಯ ಮುಖ್ಯಮಂತ್ರಿ ಗಳಿಗೆ ಸ್ಮೃತಿ ಇರಾನಿ ವಿವರಣೆ ನೀಡಿದರು
ಇದಕ್ಕೆ ಪ್ರತಿಕ್ರಿಯಿಸಿದ ಮಾನ್ಯ ಮುಖ್ಯಮಂತ್ರಿ ಗಳು ಮೋದಿ ಅವರ ಸ್ವಸ್ಥ ಭಾರತ ನಿರ್ಮಾಣದ ಕನಸು ನನಸಾಗುವ ಕಾರ್ಯಕ್ರಮ ಇದಾಗಿದ್ದು ಇದಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ಈಗಾಗಲೇ ರಾಜ್ಯ ಸರ್ಕಾರ 19 ಜಿಲ್ಲೆಗಳಲ್ಲಿ ಪೋಷಣ ಅಭಿಯಾನಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು ಮುಂದಿನ ದಿನಗಳಲ್ಲಿ ಉಳಿದಿರುವ 11 ಜಿಲ್ಲೆಗಳಲ್ಲೂ ಇದನ್ನು ಜಾರಿಗೆ ತರುತ್ತೇವೆ. ಆದಷ್ಟು ಬೇಗ ಅಧಿಕಾರಿಗಳ ಜೊತೆ ಒಂದು ಸಭೆ ನಡೆಸಿ ಪೋಷಣ ಅಭಿಯಾನ ರಾಜ್ಯದಲ್ಲಿ ಫಲಿತಾಂಶ ತರುವಂತಹ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಅಂತ ಮಾನ್ಯ ಕೇಂದ್ರ ಮಂತ್ರಿಗಳಿಗೆ ಭರವಸೆ ನೀಡಿದರು