ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಯನ್ನು ಅವಮಾನಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಆಮ್ ಆದ್ಮಿ ಪಕ್ಷದ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಶುಕ್ರವಾರ (ಅಕ್ಟೋಬರ್ 14) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಜಿದ್ದಾಜಿದ್ದಿನ ಅಖಾಡ: ಇಂದು ಮಧ್ಯಾಹ್ನ ಗುಜರಾತ್, ಹಿಮಾಚಲ ಪ್ರದೇಶದ ಚುನಾವಣಾ ದಿನಾಂಕ ಘೋಷಣೆ
ರಾಜಧಾನಿ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇರಾನಿ, ಕೀಳು ಮಟ್ಟದ ರಾಜಕೀಯಕ್ಕಾಗಿ ಗುಜರಾತ್ ನ ಆಮ್ ಆದ್ಮಿ ಪಕ್ಷದ ಘಟಕ ಪ್ರಧಾನಿ ನರೇಂದ್ರ ಮೋದಿ ಅವರ ಶತಾಯುಷಿ ತಾಯಿಗೆ ಅವಮಾನ ಮಾಡಿದೆ ಎಂದು ತಿಳಿಸಿದರು.
ಪ್ರಧಾನಿ ಮೋದಿ ಅವರ ತಾಯಿಗೆ ಅವಮಾನ ಮಾಡಿರುವ ಬಗ್ಗೆ ಆಮ್ ಆದ್ಮಿ ಪಕ್ಷಕ್ಕೆ ಎಚ್ಚರಿಕೆ ನೀಡಿರುವ ಸ್ಮೃತಿ ಇರಾನಿ, ಆಪ್ ಮುಖಂಡರು ಗುಜರಾತ್ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಕೊಳಕು ರಾಜಕೀಯಕ್ಕಾಗಿ ಗುಜರಾತ್ ಮತದಾರರು ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಅರವಿಂದ್ ಕೇಜ್ರಿವಾಲ್ ಅವರ ಕೃಪಾಕಟಾಕ್ಷದಿಂದ ಗುಜರಾತ್ ನ ಆಪ್ ಮುಖಂಡರು ಪ್ರಧಾನಿ ಮೋದಿ ಅವರ ತಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಡಿಸಿದ್ದಾರೆ. ಕೇಜ್ರಿವಾಲ್ ಅವರ ಈ ಕೆಳಮಟ್ಟದ ರಾಜಕೀಯ ಅಚ್ಚರಿಯ ವಿಷಯವೇನಲ್ಲ. ಹೀರಾ ಬೆನ್ ಅವರ ಪ್ರಧಾನಿ ಮೋದಿ ಅವರಿಗೆ ಜನ್ಮ ನೀಡಿರುವುದೇ ದೊಡ್ಡ ಅಪರಾಧವಾಗಿದೆ. ಅವರನ್ನು ಅವಮಾನಿಸಿದ ನಿಮ್ಮ (ಆಪ್) ಮುಖಂಡರು ಮತ್ತು ಕಾರ್ಯಕರ್ತರಿಗೆ ತಕ್ಕ ಶಾಸ್ತಿಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.