Advertisement
ಹೆಬ್ರಿ ವಲಯದ ಕ್ಲಸ್ಟರ್ ಅಧಿಕಾರಿ ವೀಣಾ ಶೆಟ್ಟಿ ಹಾಗೂ ಶಾಲಾ ಶಿಕ್ಷಕರ ಮಾರ್ಗದರ್ಶನದೊಂದಿಗೆ ಶಾಲಾ ವಿದ್ಯಾರ್ಥಿಗಳು ಆಧುನಿಕ ಯುಗದಲ್ಲಿ ವ್ಯವಸಾಯ ಕ್ಷೇತ್ರದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಸಾಂಪ್ರದಾಯಿಕ ಆಹಾರ, ಸಂಸ್ಕರಿಸಿದ ಆಹಾರದ ಬಗ್ಗೆ ಜನರ ಅಭಿಪ್ರಾಯ, ವಿದ್ಯುತ್ತಿನ ಉಳಿತಾಯ, ಮಧುಮೇಹ ನಿಯಂತ್ರಣ ಹಾಗೂ ಆರೋಗ್ಯಕರ ಆಹಾರ ಕ್ರಮ ಮತ್ತು ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ನಿಯಂತ್ರಣದ ಕುರಿತು ಜಾಗೃತಿ ಹೀಗೆ ವೈಜ್ಞಾನಿಕ ವಿಷಯಗಳಿಗೆ ಸಂಬಂಧಿಸಿದಂತೆ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು.ಪ್ರಬಂಧಗಳನ್ನು ಮಂಡಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ವಿಯೊಲ್ ವಂದಿಸಿದರು.