Advertisement

Smuggling ಆರೋಪ: ಆರು ಮಂದಿ ಭಾರತೀಯರ ಸೆರೆ

09:41 PM Aug 22, 2023 | Team Udayavani |

ಇಸ್ಲಾಮಾಬಾದ್‌: ಮಾದಕ ದ್ರವ್ಯ, ಶಸ್ತ್ರಾಸ್ತ್ರ ಮತ್ತು ಮದ್ದು-ಗುಂಡುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಆರು ಮಂದಿ ಭಾರತೀಯರನ್ನು ಪಾಕಿಸ್ತಾನ ಅರೆಸೇನಾ ಪಡೆ ಬಂಧಿಸಿದೆ ಎಂದು ಪಾಕಿಸ್ತಾನ ಸೇನೆ ಮಂಗಳವಾರ ತಿಳಿಸಿದೆ.

Advertisement

ಭಾರತದೊಂದಿಗಿನ ಅಂತಾರಾಷ್ಟ್ರೀಯ ಗಡಿಯಲ್ಲಿ ನಿಯೋಜನೆಗೊಂಡಿರುವ ಪಾಕಿಸ್ತಾನ ರೇಂಜರ್ ಪಡೆಯು ಜು.29ರಿಂದ ಆ.3ರವರೆಗೆ ಆರು ಮಂದಿ ಭಾರತೀಯ ಪ್ರಜೆಗಳನ್ನು ಬಂಧಿಸಿದೆ. ಇವರು ಮಾದಕ ದ್ರವ್ಯ, ಶಸ್ತ್ರಾಸ್ತ್ರ ಮತ್ತು ಮದ್ದು-ಗುಂಡುಗಳನ್ನು ಕಳ್ಳಸಾಗಣೆಯಲ್ಲಿ ತೊಡಗಿದ್ದರು ಎಂದು ಪಾಕಿಸ್ತಾನ ಸೇನೆಯ ಮಾಧ್ಯಮ ಪ್ರಕಟಣೆ ತಿಳಿಸಿದೆ. ಸದ್ಯ ಈ ಕುರಿತು ಭಾರತೀಯ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next