ಶಿರ್ವ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬಹುನಿರೀಕ್ಷೆಯ ಹೊಸ ಎಂಬಿಎ ಕೋರ್ಸ್‌ನ ಉದ್ಘಾಟನಾ ಕಾರ್ಯಕ್ರಮವು ಫೆ. 13 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಶ್ರೀ ಸೋದೆ ವಾದಿರಾಜ ಮಠಎಜುಕೇಶನ್‌ಟ್ರಸ್ಟ್‌ನ ಅಧ್ಯಕ್ಷ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಲಿದ್ದು, ನಿಟ್ಟೆಯ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್‌ಆಫ್ ಮ್ಯಾನೇಜ್‌ಮೆಂಟ್‌ನ ನಿರ್ದೇಶಕ ಡಾ| ಗುರುರಾಜ್.ಹೆಚ್.ಕಿದಿಯೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ರತ್ನಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆರಂಭವಾದ ಎಂಬಿಎ ಕೋರ್ಸ್ ಬೆಳಗಾವಿಯ ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾನಿಲಯದ ಅನುಮೋದನೆ ಪಡೆದಿದ್ದು, ಡ್ಯುಯಲ್ ಸ್ಪೆಷಲೈಸೇಶನ್ ಆಯ್ಕೆಯನ್ನು ಹೊಂದಿದೆ. ಈ ಕೋರ್ಸ್‌ನಲ್ಲಿ ವಿದ್ಯಾರ್ಥಿಗಳು ಹಣಕಾಸು, ಮಾನವ ಸಂಪನ್ಮೂಲ ಮತ್ತು ಮಾರ್ಕೆಟಿಂಗ್ ಎಂಬ ಮೂರು ವಿಷಯಗಳಲ್ಲಿ ಎರಡನ್ನು ಆಯ್ಕೆ ಮಾಡಿಕೊಳ್ಳಬಹುದು.ಇದು ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ವೃತ್ತಿ ಜೀವನದ ಆಕಾಂಕ್ಷೆ ಮತ್ತು ಬೇಡಿಕೆಗೆ ತಕ್ಕಂತೆ ಹೊಂದಿಸಲು ಅನುವುಮಾಡಿಕೊಡುತ್ತದೆ.
ಹೊಸದಾಗಿ ಆರಂಭಗೊಂಡ ಎಂಬಿಎ ಕೋರ್ಸ್‌ನಲ್ಲಿ ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅನುಭವವನ್ನು ಪಡೆದ ನುರಿತ ಪ್ರಾಧ್ಯಾಪಕರನ್ನು ಹೊಂದಿದ್ದು ,ಇದು ವಿದ್ಯಾರ್ಥಿಗಳನ್ನು ಇಂದಿನ ಆಧುನಿಕ ವ್ಯವಸ್ಥೆಯಲ್ಲಿ ಮುನ್ನಡೆಯಲು ಅಗತ್ಯವಾದ ಕೌಶಲ್ಯ, ಜ್ಞಾನ ಮತ್ತು ಮನಸ್ಥಿತಿಯನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ.
ಈ ಕಾರ್ಯಕ್ರಮದಲ್ಲಿ ಎಂಬಿಎ ಕೋರ್ಸ್‌ನ ನಿರ್ದೇಶಕರು ಕೋರ್ಸ್‌ನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದಾರೆ.ಉದ್ಘಾಟನ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ವ್ಯಾಪಾರ ಕ್ಷೇತ್ರದ ಪ್ರಮುಖರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಎಂಬಿಎ ಕೋರ್ಸ್ ಮತ್ತು ಪ್ರವೇಶದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ https://sode-edu.in/ ವೆಬ್‌ಸೈಟನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಕಟನೆ ತಿಳಿಸಿದೆ.