Advertisement

SMVITM; ಬೆಳೆ ರೋಗದ ವೆಬ್‌ ಅಪ್ಲಿಕೇಶನ್‌ ಅಭಿವೃದ್ಧಿ

05:08 PM May 23, 2024 | Team Udayavani |

ಶಿರ್ವ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಅಂತಿಮ ವರ್ಷದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ರಹಮತ್ತುನ್ನೀಸಾ, ರಾಶಿ, ರಿಮ್ಯಾ ಮತ್ತು ಸುಮಂತ್‌ ಮುತಾಲಿಕ್‌ ಅವರು ವಿಭಾಗದ ಪ್ರಾಧ್ಯಾಪಕಿ ಚಂದನಾ ಅವರ ಮಾರ್ಗದರ್ಶನದಲ್ಲಿ ಬೆಳೆಗಳಿಗೆ ಬರುವ ರೋಗಗಳನ್ನು ಪೂರ್ವಭಾವಿಯಾಗಿ ಕಂಡು ಹಿಡಿಯುವ ವೆಬ್‌ ಅಪ್ಲಿಕೇಶನ್‌ ಅನ್ನು ಅಭಿವೃದ್ಧಿ ಪಡಿಸಿದ್ದಾರೆ.

Advertisement

ಸಾಮಾನ್ಯವಾಗಿ ಯಾವುದೇ ರಾಷ್ಟ್ರದ ಬೆನ್ನೆಲುಬಾಗಿ ಪರಿಗಣಿಸಲ್ಪಡುವ ಕೃಷಿಯು ಮಾನವ ಜೀವನ ಮತ್ತು ಆರ್ಥಿಕ ಸ್ಥಿರತೆ ಎರಡನ್ನೂ ಉಳಿಸಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ. ಆದರೆ ಆಧುನಿಕ ಯುಗವು ಬೆಳೆ ರೋಗಗಳಂತಹ ಗಮನಾರ್ಹ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದು ರೈತರ ಜೀವನವನ್ನು ಚಿಂತಾಜನಕವನ್ನಾಗಿಸಿ ಅವರ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಿದೆ.

ಈ ಎಲ್ಲಾ ಸಮಸ್ಯೆಗಳಿಂದ ರೈತರನ್ನು ಮುಕ್ತರನ್ನಾಗಿಸಲು ವಿದ್ಯಾರ್ಥಿಗಳು ಬೆಳೆಗಳಿಗೆ ಬರುವ ರೋಗಗಳನ್ನು ಪೂರ್ವಭಾವಿಯಾಗಿ ಕಂಡು ಹಿಡಿಯಲು ಮತ್ತು ಸಮರ್ಪಕವಾಗಿ ಚಿಕಿತ್ಸೆ ಒದಗಿಸಲು ನೂತನವಾದ ವೆಬ್‌ ಅಪ್ಲಿಕೇಶನ್‌ ಅನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ ವೆಬ್‌ ಅಪ್ಲಿಕೇಶನ್‌ನಲ್ಲಿ ಡೀಪ್‌ ಲರ್ನಿಂಗ್‌ ತಂತ್ರಜ್ಞಾನವನ್ನು ಬಳಸಲಾಗಿದೆ.

ವಿದ್ಯಾರ್ಥಿಗಳ ಈ ಯೋಜನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌, ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಡಾ|ಗುರುಪ್ರಸಾದ್‌ ಅಭಿನಂದನೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next