Advertisement
ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಕೆ.ಎಚ್.ಪಾಟೀಲ ಪ್ರತಿಷ್ಠಾಪನದಿಂದ ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ಕೆ.ಎಚ್.ಪಾಟೀಲ ಸಭಾಂಗಣದಲ್ಲಿ ಮಂಗಳವಾರ ನಡೆದ “ಕರ್ನಾಟಕ ಪಂಚಾಯತ ರಾಜ್ ದಿನಾಚರಣೆ’ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಇಂದು ಶೋಷಿತರು, ಹಿಂದುಳಿದವರ ಮೀಸಲಾತಿ ಬಗ್ಗೆ ಮಾತನಾಡುವ ರಾಜಕೀಯ ಪಕ್ಷಗಳು, ದಶಕಗಳ ಹಿಂದೆ ಅವರಿಗೆ ಕೇವಲ ಯಾವುದೋ ಒಂದು ಕ್ಷೇತ್ರದಲ್ಲಿ ಶಾಸನ ಸಭೆ ಟಿಕೆಟ್ ನೀಡಿ, ಇಲ್ಲವೇ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ಳಲಾಗುತ್ತಿತ್ತು. ಅದನ್ನು ತೊಡೆದು ಹಾಕಲು ಸಂವಿಧಾನದ 73ನೇ ತಿದ್ದುಪಡಿ ಹಾಗೂ ಸಿದ್ಧರಾಮಯ್ಯ ಮುಖ್ಯಮಂತ್ರಿ, ತಾವು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್ ರಾಜ್ ಕಾನೂನು ತಿದ್ದುಪಡಿಯಿಂದ ಪಂಚಾಯತ್ ಆಡಳಿತವನ್ನು ಶಕ್ತಿಯುತ ಮಾಡಿದ್ದಾಗಿ ವಿವರಿಸಿದರು. ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನ ಅಧ್ಯಕ್ಷ ಸಿ.ನಾರಾಯಣಸ್ವಾಮಿ, ಮಾಜಿ ಶಾಸಕ ಡಿ.ಆರ್.ಪಾಟೀಲ, ಮಾಜಿ ಶಾಸಕ ಜಿ.ಎಸ್ .ಪಾಟೀಲ ಮಾತನಾಡಿದರು. ಮಾಜಿ ಸಚಿವ ಎ.ಎಂ.ಹಿಂಡಸಗೀರಿ, ಮಾಜಿ ಶಾಸಕ ಬಿ.ಆರ್. ಯಾವಗಲ್, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಶ್ರೀಶೈಲಪ್ಪ ಬಿದರೂರು, ರಾಮಕೃಷ್ಣ ದೊಡ್ಡಮನಿ, ವಿ.ವೈ.ಘೋರ್ಪಡೆ, ಡಿ.ಆರ್. ಪಾಟೀಲ, ಚನ್ನಪ್ಪ ಜಗಲಿ, ವಾಸಣ್ಣ ಕುರಡಗಿ ಇದ್ದರು. ಜನಪ್ರತಿನಿಧಿಗಳು ತಮ್ಮ ಹಕ್ಕು, ಅಧಿಕಾರಕ್ಕಾಗಿ ಹೋರಾಡುವ ಅಗತ್ಯ ಈಗಿಲ್ಲ. ಸಂವಿಧಾನಾತ್ಮಕವಾಗಿಯೇ ಅವಕಾಶ ಮತ್ತು ಅಧಿಕಾರಗಳನ್ನು ಒದಗಿಸಲಾಗಿದೆ. ಪಂಚಾಯತ್ ಮಟ್ಟದಲ್ಲಿ ಅಧ್ಯಕ್ಷರು, ಸದಸ್ಯರು ತಮ್ಮ ಅಧಿಕಾರ, ಹಕ್ಕುಗಳನ್ನು ಸಮರ್ಥವಾಗಿ ಚಲಾಯಿಸಬೇಕು. ಯಾವುದೇ ಕಾರಣಕ್ಕೂ ಶಾಸಕ, ಸಂಸದರ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು. ಗ್ರಾಮಗಳಲ್ಲಿ ನಿಯಮಿತವಾಗಿ ಗ್ರಾಮ ಸಭೆ ನಡೆಸಿ ಜನರ ಬೇಕು, ಬೇಡಗಳನ್ನು ಈಡೇರಿಸಲು ಪ್ರಯತ್ನಿಸಬೇಕು.
ಎಚ್.ಕೆ.ಪಾಟೀಲ,
ಕಾಂಗ್ರೆಸ್ ಹಿರಿಯ ನಾಯಕ ಮಹಿಳೆಯರಿಗೆ ಮೀಸಲಾತಿ ನೀಡಿದರೆ ಸಾಲದು, ಅವರಿಗೆ ನೈಜವಾಗಿ ಅಧಿಕಾರ ಚಲಾಯಿಸುವ ವಾತಾವರಣ ಕಲ್ಪಿಸಬೇಕು. ದೇಶದಲ್ಲಿ ಮೊದಲ ಬಾರಿಗೆ ಜಿಪಂ, ತಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಜಾರಿಗೊಳಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಅದು ಕರ್ನಾಟಕದಲ್ಲಿ ಮೊದಲು ಜಾರಿಗೆ ಬಂದಿದೆ. ಸಂವಿಧಾನದ 73ನೇ ತಿದ್ದುಪಡಿ, ಅಧಿ ಕಾರ ವಿಕೇಂದ್ರೀಕರಣದ ಬಗ್ಗೆ ಜನರಲ್ಲಿ ಜಗೃತಿ ಮೂಡಿಸುವ ಕಾರ್ಯ ದೇಶಾದ್ಯಂತ
ನಡೆಯಬೇಕು. ಅದರ ಸದಾಶಯವನ್ನು ಈಡೇರಿಸಲು ಎಲ್ಲರೂ ಕೈಜೋಡಿಸಬೇಕು.
ಎಂ.ವೀರಪ್ಪ ಮೋಯ್ಲಿ, ಮಾಜಿ ಸಿಎಂ