ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ಜಿಲ್ಲಾಸ್ಪತ್ರೆ, ತಾಲೂಕು ಹಾಗೂ ಆಯ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳಾಗಿ ಗುರುತಿಸಿದ್ದು, ಇಲ್ಲಿ ಹಾವು ಕಡಿತಕ್ಕೆ ಒಳಗಾದವರಿಗೆ ವಿವಿಧ ಹಂತಗಳಲ್ಲಿ ಸೂಕ್ತ ಚಿಕಿತ್ಸೆ ನೀಡಲು ಮಾರ್ಗಸೂಚಿ ಹೊರಡಿಸಿದೆ.
ಹಾವು ಕಡಿತ ಪ್ರಕರಣಗಳು ವರದಿಯಾಗುತ್ತಿದ್ದಂತೆ ಆಶಾ ಕಾರ್ಯಕರ್ತೆಯರು ರೋಗಿಗಳ ಸಂಬಂಧಿಕರೊಂದಿಗೆ ಸಮಾಲೋಚಿಸಿ ರೋಗಿಗಳನ್ನು ಸಮೀಪದ ಪ್ರಾಥಮಿಕ ಹಾಗೂ ತಾಲೂಕು ಆಸ್ಪತ್ರೆಗೆ ಶಿಫಾರಸು ಮಾಡಬೇಕು.
ಉಪ ಕೇಂದ್ರಗಳಿಗೆ ಬರುವ ರೋಗಿಗಳನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಪಿಎಚ್‌ಸಿ ಹಾಗೂ ತಾಲೂಕು ಕೇಂದ್ರಕ್ಕೆ ಶಿಫಾರಸು ಮಾಡಲಾಗುತ್ತದೆ. ಇಲ್ಲಿ ರೋಗಿಗಳನ್ನು ತಪಾಸಣೆಗೆ ಒಳಪಡಿಸುವಾಗ ಹಾವಿನ ನಂಜಿನ ಲಕ್ಷಣಗಳಿದ್ದರೆ ಸಂಬಂಧಿಕರ ಒಪ್ಪಿಗೆ ಮೇರೆಗೆ ಲಸಿಕೆಯನ್ನು ಉಚಿತವಾಗಿ ನೀಡಿ, ಸಮೀಪದ ಜಿಲ್ಲಾಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ಮೂಲಕ ರವಾನಿಸಬೇಕು. ಜತೆಗೆ ರೋಗಿಯ ಮಾಹಿತಿಯನ್ನು ಐಎಚ್‌ಐಪಿ ಪೋರ್ಟಲ್‌ಗೆ ವರದಿ ಮಾಡುವುದು.