ಕೇರಳ : ಸರಗಳ್ಳನನ್ನು ಹಿಡಿಯಲು ಹೋದ ಪೊಲೀಸ್ ಅಧಿಕಾರಿಗೆ ನಾಗರ ಹಾವೊಂದು ಕಚ್ಚಿದ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಮಟ್ಟನೂರು ಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ.
ಅಂದಹಾಗೆ ಈ ಘಟನೆ ನಡೆದಿರುವುದು ಗುರುವಾರ ರಾತ್ರಿ ರಸ್ತೆ ಬದಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಬೈಕ್ ನಲ್ಲಿ ಬಂದ ಇಬ್ಬರು ಮಹಿಳೆಯ ಕತ್ತಿನಿಂದ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ ಈ ವೇಳೆ ಮಹಿಳೆ ಕೂಗಿಕೊಂಡಿದ್ದಾರೆ ಕೂಡಲೇ ಅಕ್ಕಪಕ್ಕದ ಜನ ಸೇರಿ ಹತ್ತಿರದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಕಾರ್ಯಪ್ರವೃತ್ತರಾದ ಪೊಲೀಸರು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ತಡೆದು ತಪಾಸಣೆಗೆ ತೊಡಗಿದ್ದಾರೆ ಈ ವೇಳೆ ಅದೇ ಮಾರ್ಗದಲ್ಲಿ ಬಂದ ಕಳ್ಳರು ಪೊಲೀಸರನ್ನು ಕಂಡು ಕತ್ತಲಲ್ಲಿ ಓಡಿ ಹೋಗಿದ್ದಾರೆ, ಇದನ್ನು ಕಂಡ ಪೊಲೀಸ್ ಅಧಿಕಾರಿ ಕಳ್ಳರನ್ನು ಬೆನ್ನಟ್ಟಿದ್ದಾರೆ ಈ ವೇಳೆ ಪೊಲೀಸ್ ಅಧಿಕಾರಿಯ ಕಾಲಿಗೆ ನಾಗರ ಹಾವೊಂದು ಕಚ್ಚಿದೆ ಕೂಡಲೇ ಪೊಲೀಸ್ ಅಧಿಕಾರಿಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿದ ಪರಿಣಾಮ ಪೊಲೀಸ್ ಅಧಿಕಾರಿ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಕಳ್ಳ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದು, ಸದ್ಯ ಕಳ್ಳನನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.
ಇದನ್ನೂ ಓದಿ : ಬಿಜೆಪಿ ಸರಕಾರದಿಂದ ಕಾಸಿಗಾಗಿ ಪೋಸ್ಟಿಂಗ್: ಕುಮಾರಸ್ವಾಮಿ ಆರೋಪ