Advertisement
ಎಂ. ಲಕ್ಷ್ಮಣ್ ಮಾತನಾಡಿ, ಸ್ನೇಹಮಹಿ ಕೃಷ್ಣ ರೌಡಿಶೀಟರ್. ಆತನ ಮೇಲೆ 44 ಪ್ರಕರಣಗಳಿವೆ. ಸಾರ್ವಜನಿಕ ವಲಯದಲ್ಲಿ ಮುಖ್ಯಮಂತ್ರಿ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ದಾಖಲೆ ಬಿಡುಗಡೆ ಮಾಡುತ್ತಿ¨ªಾನೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಲ್ಲಿ ಸುಳ್ಳು ದಾಖಲೆ ನೀಡಿದ್ದಾನೆ. ಆತ ಬಿಡುಗಡೆ ಮಾಡಿರುವ ಚಲನ್, ಹಣ ಕಟ್ಟಿರುವ ದಾಖಲೆ ಎಲ್ಲವೂ ಸುಳ್ಳು ಎಂದು ಅಧಿಕಾರಿಗಳೇ ಹೇಳಿದ್ದಾರೆ. ಕೂಡಲೇ ಆತನನ್ನು ಬಂಧಿಸದಿದ್ದರೆ ನಾಳೆಯಿಂದ ಪೊಲೀಸ್ ಠಾಣೆ ಎದುರು ಧರಣಿ ಮಾಡುತ್ತೇವೆ ಎಂದರು. ಬುಧವಾರ ದೇವರಾಜ ಪೊಲೀಸ್ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣಮಯಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಸಾಮಾಜಿಕ ಕಾರ್ಯಕರ್ತ, ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿ ಮುಖ್ಯಮಂತ್ರಿ ವಿರುದ್ಧ ದೂರು ನೀಡಿರುವ ಸ್ನೇಹಮಯಿ ಕೃಷ್ಣ ವಿರುದ್ಧ ಎರಡನೇ ದೂರು ದಾಖಲಿಸಿದ ಬೆನ್ನಲ್ಲೇ ಕೃಷ್ಣ ಪ್ರತಿದೂರು ದಾಖಲಿಸಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ, ದೂರು ನೀಡಿ ಬೆದರಿಕೆ ಹಾಕುತ್ತಿದ್ದಾರೆ. ಆದ್ದರಿಂದ ಅವರ (ಎಂ. ಲಕ್ಷ್ಮಣ್) ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಲಕ್ಷ್ಮೀಪುರಂ ಠಾಣೆಯ ಪೊಲೀಸ್ ನಿರೀಕ್ಷಕರಿಗೆ ತುರ್ತು ಸೂಚನೆ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತರಿಗೆ ಪ್ರತಿದೂರು ನೀಡಿದ್ದಾರೆ. ನನ್ನ ಕಾನೂನುಬದ್ಧ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿಗಳು ನಿವೇಶನಗಳನ್ನು ವಾಪಸ್ ಕೊಟ್ಟಿದ್ದಾರೆಯೇ ಹೊರತು, ರೌಡಿಸಂಗೆ ಹೆದರಿ ಕೊಟ್ಟಿಲ್ಲ ಎಂದಿದ್ದಾರೆ.