Advertisement
ಸಿದ್ದರಾಮಯ್ಯ ಸಂಪುಟದಲ್ಲಿ ಎಲ್ಲ ಜಾತಿ-ವರ್ಗಕ್ಕೆ ಪ್ರಾತಿನಿಧ್ಯವಿದೆ. ಆದರೆ 9 ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿಲ್ಲ. ಎಂದಿನಂತೆ ಬೆಂಗಳೂರು ಸಹಿತ ಹಳೆ ಮೈಸೂರು ಭಾಗಕ್ಕೆ ಸಿಂಹಪಾಲು ಲಭಿಸಿದ್ದು, ಲಿಂಗಾಯತ ಸಮುದಾಯಕ್ಕೆ ಒಟ್ಟು 7 ಸ್ಥಾನಗಳನ್ನು ನೀಡುವ ಮೂಲಕ ವೀರಶೈವ-ಲಿಂಗಾಯತ ಮತಬ್ಯಾಂಕ್ ಕಾಪಿಟ್ಟುಕೊಳ್ಳುವ ಲೆಕ್ಕಾಚಾರಕ್ಕೆ ಕಾಂಗ್ರೆಸ್ ಮುಂದಾಗಿದೆ.
Related Articles
ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.ಹಿಂದುಳಿದ ಜಾತಿಗಳಲ್ಲಿ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್, ಕುರುಬ ಸಮುದಾಯದಿಂದ ಸಿದ್ದರಾಮಯ್ಯ, ಬೈರತಿ ಸುರೇಶ್, ಬಿಲ್ಲವ (ಈಡಿಗ) ಸಮುದಾಯದಿಂದ ಮಧು ಬಂಗಾರಪ್ಪ ಸಚಿವರಾಗಿದ್ದಾರೆ.
Advertisement
ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್, ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್, ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮು ದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.
9 ಜಿಲ್ಲೆಗೆ ಸಿಗದ ಪ್ರಾತಿನಿಧ್ಯ ಸಿದ್ದರಾಮಯ್ಯ ಸಂಪುಟದಲ್ಲಿ 9 ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಬೆಂಗಳೂರು ನಗರದಿಂದ ಆರು ಜನರಿಗೆ ಅವಕಾಶ ಕಲ್ಪಿಸಿರುವುದು ಮತ್ತೆ ಅಸಮಾಧಾನಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮಡಿಕೇರಿ, ಚಾಮರಾಜನಗರ, ಕೋಲಾರ, ಹಾವೇರಿ ಹಾಗೂ ವಿಜಯನಗರ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಸಿದ್ದರಾಮಯ್ಯ ಒಳಗೊಂಡಂತೆ ಮೈಸೂರಿಗೆ 3, ಬೆಳಗಾವಿಗೆ 2 ಹಾಗೂ ಕಲಬುರಗಿ ಜಿಲ್ಲೆಗೆ 2 ಸಂಪುಟ ಸ್ಥಾನ ಲಭಿಸಿದೆ.