ಕಾಸರಗೋಡು: ಶಿಕ್ಷಣದ ಮೂಲಕ ಸಮಾಜ ಸುಧಾರಣೆ ಸಾಧ್ಯ. ಜತೆಗೆ ಸತøಜೆಯಾಗಲು ಸಾಧ್ಯ. ಸಮಾಜದಲ್ಲಿ ಗೌರವ ಲಭಿಸಬೇಕಿದ್ದಲ್ಲಿ ಉನ್ನತ ಶಿಕ್ಷಣ ಪಡೆಯಬೇಕು. ಶಿಕ್ಷಣದೊಂದಿಗೆ ನಮ್ಮ ಸಮಾಜದ ಸಂಸ್ಕೃತಿ, ಆಚಾರ-ವಿಚಾರಗಳನ್ನು ರೂಢಿಸಿಕೊಳ್ಳಬೇಕೆಂದು ಉಡುಪಿಯ ಕರಾವಳಿ ಕಾವಲು ಪಡೆಯ ಇನ್‌ಸ್ಪೆಕ್ಟರ್ ಆಫ್ ಪೊಲೀಸ್ ಪ್ರಮೋದ್ ಕುಮಾರ್ ಹೇಳಿದರು.
ನಾಗರಕಟ್ಟೆಯ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಸೇವಾ ಸಮಾಜದ ನೇತೃತ್ವದಲ್ಲಿ ನಾಗರಕಟ್ಟೆಯ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಸ್ಮಾರಕ ಮಂದಿರದಲ್ಲಿ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿಯವರ 133 ನೇ ವರ್ಧಂತ್ಯುತ್ಸವ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪುಸಕ್ತ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಚಟಗಳಿಗೆ ಬಲಿಯಾಗದೆ ತಮ್ಮತನವನ್ನು ಮೈಗೂಡಿಸಿಕೊಂಡು ಸಮಾಜ ಸುಧಾರಣೆಯಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು. ತಮ್ಮ ಹಿರಿಯರು ಅನುಸರಿಸಿಕೊಂಡು ಬಂದಿರುವ ಸಂಸ್ಕೃತಿ, ಆಚಾರ-ವಿಚಾರಗಳನ್ನು ಯುವ ತಲೆಮಾರಿಗೆ ಹಸ್ತಾಂತರಿಸುವ ಕೆಲಸ ನಡೆಯಬೇಕು. ಈ ಮೂಲಕ ಸ್ವಸಮಾಜದ ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯವಾಗುವುದು ಎಂದರು. ಒಗ್ಗಟ್ಟಿನಿಂದ ಸಮಾಜವನ್ನು ಕಟ್ಟಲು ಸಾಧ್ಯವಾಗುವುದರಿಂದ ಸರ್ವರೂ ಏಕತೆಯಿಂದ ದುಡಿಯಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಸೇವಾ ಸಮಾಜ ಅಧ್ಯಕ್ಷ ಲಕ್ಷ್ಮಣ ಬೀರಂತಬೈಲು ಅಧ್ಯಕ್ಷತೆ ವಹಿಸಿದರು.
ಪುತ್ತೂರು ನಗರಸಭಾ ಸದಸ್ಯೆ ಮಮತಾ ರಂಜನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕೋಟೆಯವರ ಯಾನೆ ಕೋಟೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಮಾಸ್ಟರ್, ಮೂಡಬಿದ್ರೆಯ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶಕುಂತಲಾ ರಾಮಚಂದ್ರ, ಹರೀಶ್ ದುಬಾೖ, ಉದ್ಯಮಿ ಪ್ರಾಣೇಶ್ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಸೇವಾ ಸಮಾಜದ ಉಪಾಧ್ಯಕ್ಷರಾದ ಸುಧಾಕರ ಕೂಡ್ಲು, ದಿನೇಶ್ ಚಂದ್ರಗಿರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಭಾಕರ ಕಂಪೌಂಡರ್, ಶ್ರೀನಿವಾಸ ವಿ., ದಿವ್ಯಾ ಪ್ರಮೋದ್ ಅವರನ್ನು ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು. ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಸೇವಾ ಸಮಾಜದ ಪ್ರಧಾನ ಕಾರ್ಯದರ್ಶಿ ದಿನೇಶ್ ನಾಗರಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನಾಗಶ್ರೀ ವಂದಿಸಿದರು.