Advertisement

ಸಾಮಾಜಿಕ ಹೊಣೆಗಾರಿಕೆ ಅತ್ಯಗತ್ಯ

12:53 PM Oct 17, 2018 | |

ಬೆಂಗಳೂರು: ಸಾಮಾಜಿಕ ಹೊಣೆಗಾರಿಕೆ ಮಾಧ್ಯಮ ರಂಗದ ಪ್ರಮುಖ ಭಾಗವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶವೊಂದರ ಅಭಿವೃದ್ಧಿಗೆ ಇದು ಸಹಕಾರಿಯಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ಹೇಳಿದರು.

Advertisement

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದ ಸಂವಹನ ವಿಭಾಗದಲ್ಲಿ ಮಂಗಳವಾರ ಸಂವಹನ ಕೂಟದ ಉದ್ಘಾಟನೆ ಹಾಗೂ ಕಿರಿಯ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂವಹನ ಕೌಶಲತೆ ಅತ್ಯವಶ್ಯಕ. ವಿದ್ಯಾರ್ಥಿಗಳು ಪರಿಶ್ರಮಪಟ್ಟು ಓದಬೇಕು. ಸಮಾಜದ ಎಲ್ಲ ಕ್ಷೇತ್ರಗಳ ಬಗೆಗೆ ತಿಳಿವಳಿಕೆ ಹೊಂದಿರಬೇಕು. ಓದುವ ಮನಸ್ಸಿದ್ದರೆ ವಿದ್ಯಾರ್ಥಿ ಪ್ರಗತಿ ಹೊಂದಲು ಸಾಧ್ಯ ಎಂದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು ಮಾತನಾಡಿ, ದೃಶ್ಯ ಮತ್ತು ಪತ್ರಿಕಾ ಮಾಧ್ಯಮದ ಬಂಡಾವಳ ಹೊಡಿಕೆದಾರರು ಗ್ರಾಹಕರನ್ನು ಸೃಷ್ಟಿಮಾಡುವ ಭರದಲ್ಲಿ ಸುದ್ದಿಯ ಗುಣಮಟ್ಟಕ್ಕೆ ಆದ್ಯತೆ ನೀಡುತ್ತಿಲ್ಲ. ಇಡೀ ಪತ್ರಿಕೋದ್ಯಮವೇ ಇಂದು ಒತ್ತಡದಲ್ಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕುಲಸಚಿವ ಪ್ರೊ.ಬಿ.ಕೆ.ರವಿ ಮಾತನಾಡಿ, ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗ ದೇಶದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಸದಾ ಅಧ್ಯಯನ ಶೀಲರಾಗಿರಬೇಕು, ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಂತೆ ತಮ್ಮ ವೃತ್ತಿ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಪತ್ರಕರ್ತ ಅಗ್ನಿ ಶ್ರೀಧರ್‌, ಮೌಲ್ಯಮಾಪನ ಕುಲಸಚಿವ ಪ್ರೊ.ಸಿ.ಶಿವರಾಜು, ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಎನ್‌.ಎಸ್‌. ಅಶೋಕ್‌ ಕುಮಾರ್‌, ಪ್ರಾಧ್ಯಾಪಕರಾದ ಡಾ.ಎನ್‌. ಸಂಜೀವರಾವ್‌, ಡಾ.ಶೈಲಶ್ರೀ, ಪ್ರವೀಣ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next