Advertisement
ಸಮರ್ಪಕ ಅನುಷ್ಠಾನ ಇಲ್ಲ: ರಾಜ್ಯದಲ್ಲಿ ಒಂದೆಡೆ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯದ ಮೂಲಕ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸಿ ಅರ್ಹರಿಗೆ ಸ್ಥಳದಲ್ಲಿಯೇ ತಲುಪಿಸುವ ಕಾರ್ಯ ನಡೆಸುತ್ತಿದ್ದರೂ ಜಿಲ್ಲೆಯಲ್ಲಿ ಮಾತ್ರ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವುದು ಎದ್ದು ಕಾಣುತ್ತಿದೆ.
Related Articles
Advertisement
231 ಅರ್ಜಿ ಬಾಕಿ: ಜಿಲ್ಲೆಯಲ್ಲಿ ಅಂತ್ಯಸಂಸ್ಕಾರ ಯೋಜನೆಯಡಿ ಜಿಲ್ಲಾಡಳಿತಕ್ಕೆ 335 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ. ಆದರೆ ಆ ಪೈಕಿ ಕೇವಲ 101 ಮಂದಿಗೆ ಮಾತ್ರ ಯೋಜನೆಯ ಲಾಭ ಸಿಕ್ಕಿರುವುದು ಬಿಟ್ಟರೆ ಉಳಿದ 231 ಮಂದಿಗೆ ಯೋಜನೆಯ ಲಾಭ ಸಿಗದೇ ನಿತ್ಯ ಕಚೇರಿಗಳಿಗೆ ಅಲೆದಾಡುವಂತಾಗಿದೆ.
ಇನ್ನೂ ಜೂನ್ ತಿಂಗಳಲ್ಲಿಯೇ ಅಂತ್ಯಸಂಸ್ಕಾರ ಯೋಜನೆಗೆ 123 ಅರ್ಜಿಗಳು ಸಲ್ಲಿಕೆಯಾಗಿವೆ. ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿ ಒಟ್ಟು 183 ಅರ್ಜಿ ಸಲ್ಲಿಕೆಯಾಗಿದ್ದರೂ ಇದುವರೆಗೂ ಕೇವಲ 32 ಮಂದಿಗೆ ಮಾತ್ರ ಪರಿಹಾರ ಸಿಕ್ಕಿದ್ದು, ಇನ್ನೂ 149 ಅರ್ಜಿಗಳು ಹಾಗೆ ದೂಳು ತಿನ್ನುತ್ತಿವೆ.
ಜಿಲ್ಲೆಯಲ್ಲಿ ವೃದ್ಧಾಪ್ಯ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೊಜನೆ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಇನ್ನೂ 531 ಅರ್ಜಿಗಳು ವಿಲೇವಾರಿಯಾಗದೇ ಉಳಿದುಕೊಂಡಿವೆ.
ಜನಸ್ಪಂದನಾ ಸಭೆ ಮರೆತ ಶಾಸಕರು: ಜಿಲ್ಲೆಯ ಶಾಸಕರು ತಿಂಗಳಿಗೊಮ್ಮೆ ಶನಿವಾರದಂದು ಹೋಬಳಿ ಮಟ್ಟದಲ್ಲಿ ಜನ ಸ್ಪಂದನಾ ಸಭೆಗಳನ್ನು ಆಯೋಜಿಸಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಸೂಚಿಸುತ್ತಿದ್ದರು.
ಸ್ಪಂದನಾ ಸಭೆಗೆ ಪದೇ ಪದೆ ಫಲಾನುಭವಿಗಳು ಬಂದು ಶಾಸಕರ ಮುಂದೆ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಬಹಿರಂಗವಾಗಿ ದೂರು ಹೇಳುತ್ತಿದ್ದರಿಂದ ಅಧಿಕಾರಿಗಳು ಜನಸ್ಪಂದನಾ ಸಭೆಗಳಿಗೆ ಭಯ ಬಿದ್ದು ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಸಮರ್ಪಕವಾಗ ಅನುಷ್ಠಾನಗೊಳಿಸುತ್ತಿದ್ದರು.
ಆದರೆ ಜಿಲ್ಲೆಯ ಶಾಸಕರು ಜನಸ್ಪಂದನಾ ಸಭೆಗಳನ್ನು ಸಂಪೂರ್ಣ ಮರೆತಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಆರಂಭದಲ್ಲಿ 2-3 ಸಭೆಗಳನ್ನು ನಡೆಸಿದ್ದು ಬಿಟ್ಟರೆ ಮತ್ತೆ ಮರೆತೇ ಹೋಗಿದ್ದಾರೆ. ಜಿಲ್ಲೆಯ ಯಾವ ಶಾಸಕರು ಕೂಡ ಹೋಬಳಿ ಮಟ್ಟದ ಜನಸ್ಪಂದನಾ ಸಭೆಗಳನ್ನು ಆಯೋಜಿಸುತ್ತಿಲ್ಲ.
ಜುಲೈ 5 ರಿಂದ ಸಚಿವರ ಜನಸ್ಪಂದನಾ ಸಭೆ: ಸದ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಹೆಚ್.ಶಿವಶಂಕರರೆಡ್ಡಿ ಜುಲೈ 5 ರಿಂದ ಜಿಲ್ಲೆಯಲ್ಲಿ ಜನಸ್ಪಂದನಾ ಸಭೆಗಳನ್ನು ಆಯೋಜಿಸುತ್ತಿದ್ದಾರೆ. ಮೊದಲ ಬಾರಿಗೆ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಹಮ್ಮಿಕೊಂಡಿದ್ದಾರೆ.
ಸಚಿವರು ಜಿಲ್ಲೆಯ ಜನಸಾಮಾನ್ಯರು ಅದರಲ್ಲೂ ಬಡವರಿಗೆ ಕೈಗೆಟುಕದೇ ದೂರು ಉಳಿದಿರುವ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳ ಅನುಷ್ಠಾನದ ವಿಚಾರದಲ್ಲಿ ಹೆಚ್ಚು ಕಾಳಜಿ ವಹಿಸಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ದೊರಕಿಸಬೇಕಿದೆ. ಜೊತೆಗೆ ಸಾಮಾಜಿಕ ಭದ್ರತಾ ಯೋಜನೆಗಳಿಂದ ವಂಚಿತರಾಗಿರುವರನ್ನು ಗುರುತಿಸಿ ಅವರಿಗೂ ಸರ್ಕಾರ ಸೌಲಭ್ಯಗಳನ್ನು ದೊರೆಯುವ ದಿಸೆಯಲ್ಲಿ ಅರಿವು ಮೂಡಿಸುವ ಕೆಲಸವನ್ನು ಜಿಲ್ಲಾಡಳಿತದಿಂದ ಮಾಡಬೇಕಿದೆ.
ಜಿಲ್ಲೆಯಲ್ಲಿ ಅಂತ್ಯಸಂಸ್ಕಾರ ಯೋಜನೆ, ರಾಷ್ಟ್ರೀಯ ಕುಟುಂಬ ನೆರವು ಯೋಜನೆ ಮತ್ತಿತರ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಯಾವುದೇ ವ್ಯಕ್ತಿ ಈ ಯೋಜನೆಗಳಲ್ಲಿ ಪರಿಹಾರಕ್ಕೆ ಅರ್ಜಿ ಹಾಕಿದ ಕೂಡಲೇ ಪರಿಹಾರ ದೊರಕಿಸಬೇಕು. ಸಾಮಾಜಿಕ ಭದ್ರತಾ ಯೋಜನೆಗಳಿಗೆ ಒತ್ತು ಕೊಡದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುತೇವೆ.-ಡಾ.ಎನ್.ನಾಗಾಂಬಿಕಾದೇವಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ * ಕಾಗತಿ ನಾಗರಾಜಪ್ಪ