Advertisement

Udupi ನಾಟಕದಿಂದ ಸಮಾಜ ಪರಿವರ್ತನೆ: ಡಾ| ಬಲ್ಲಾಳ್‌

11:22 PM Nov 22, 2023 | Team Udayavani |

ಉಡುಪಿ: ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರ ದ ಬಗ್ಗೆ ನಾಟಕದ ಮೂಲಕ ಅರಿವು ಮೂಡಿಸುವುದರಿಂದ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದೆ ಎಂದು ಮಾಹೆ ವಿ.ವಿ. ಸಹ ಕುಲಾಧಿಪತಿ ಹಾಗೂ ರಂಗಭೂಮಿಯ ಗೌರವಾಧ್ಯಕ್ಷ ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದರು.

Advertisement

ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬುಧವಾರ ರಂಗಭೂಮಿ ವತಿಯಿಂದ 44ನೇ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು.

ದೇಶದ ಯುವ ಜನತೆಗೆ ನಾಟಕ ಸ್ಪರ್ಧೆಗಳ ಮೂಲಕ ಅರಿವು ಮೂಡಿಸುವ ಕೆಲಸವಾಗಬೇಕು. ಸಿನೆಮಾ
ತಾರೆಯರಿಗಿಂತಲೂ ನಾಟಕ, ಯಕ್ಷ ಗಾನ ಕಲಾವಿದರ ಶ್ರಮ ಅಪಾರ. ಸಿನೆಮಾದಲ್ಲಿ ಒಂದು ದೃಶ್ಯಕ್ಕೆ ಹಲ ವಾರು ಟೇಕ್‌ಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ನಾಟಕ, ಯಕ್ಷ ಗಾನದಲ್ಲಿ ಹಾಗೆ ಸಾಧ್ಯವಿಲ್ಲ. ಈ ಕಾರಣಕ್ಕೆ ಇಂತಹ ಕಲೆ ಮತ್ತಷ್ಟು ಬೆಳೆಯ ಬೇಕು. ನಾಟಕಗಳಲ್ಲಿ ಯುವಜನತೆ ಹಾಗೂ ಮಕ್ಕಳ ಪಾಲ್ಗೊಳ್ಳುವಿಕೆ ಅತೀ ಅಗತ್ಯವಾಗಿದೆ. ಇದರಿಂದ ಈ ಕಲೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯಲು ಸಾಧ್ಯ ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ ಉದ್ಘಾ ಟಿಸಿ, ನಾಟಕ ಕಲೆ ವಿಶಿಷ್ಟ ವಾದುದು. ಈ ಕಲೆಯನ್ನು ಮತ್ತಷ್ಟು ಬೆಳೆಸುವ ನಿಟ್ಟಿನಲ್ಲಿ ವಿಭಿನ್ನತೆ ತರುವ ಕೆಲಸವಾಗಬೇಕು ಎಂದು ಹೇಳಿದರು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್‌ ಶೆಟ್ಟಿ, ಉದ್ಯಮಿಗಳಾದ ಸತ್ಯಾನಂದ ನಾಯಕ್‌,
ಗೋಪಾಲ ಸಿ. ಬಂಗೇರ ಉಪಸ್ಥಿತ ರಿದ್ದರು. ರಂಗಭೂಮಿ ಅಧ್ಯಕ್ಷ ಡಾ| ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರಧಾನ ಕಾರ್ಯ ದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ವಂದಿಸಿ, ನಿರೂಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next