Advertisement

ಸಮಾಜ ಕಲ್ಯಾಣ ಇಲಾಖೆ ಎಫ್‌ಡಿಎ ಲೋಕಾಯುಕ್ತ ಬಲೆಗೆ

09:50 PM Sep 22, 2022 | Team Udayavani |

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೆಲ್‌ಗಳಿಗೆ ಪಾತ್ರೆ ಮತ್ತಿತರೆಪರಿಕರಗಳನ್ನು ಸರಬರಾಜು ಮಾಡಿದ ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಲಂಚದ ಬೇಡಿಕೆ ಇಟ್ಟಿದ್ದ ಸಹಾಯಕ ನಿರ್ದೇಶಕರ ಕಚೇರಿ ಪ್ರಥಮ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.

Advertisement

ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಥಮ ದರ್ಜೆ ಸಹಾಯಕ ನರಸಿಂಹಮೂರ್ತಿ ಬಂಧಿತ ಆರೋಪಿ.ಸಜ್ಜನಕೆರೆ ಗ್ರಾಮದ ಕಲ್ಲೇಶ್ವರ ಏಜೆನ್ಸಿ ಮಾಲಿಕ ಎಸ್.ಬಿ.ಲೋಕೇಶ್, ಆಗಸ್ಟ್ 2 ರಂದು ಸಮಾಜ ಕಲ್ಯಾಣ ಇಲಾಖೆ ಕರೆದಿದ್ದ ಟೆಂಡರ್‌ನಲ್ಲಿ ಭಾಗವಹಿಸಿ ಕಾರ್ಯಾದೇಶ ಪಡೆದು ಹಿಂಡಾಲಿಯಂ ಪಾತ್ರೆ, ಮುಚ್ಚಳ, ಮಿಕ್ಸಿ, ಸ್ಟೀಲ್ ಬಕೇಟ್‌ಗಳನ್ನು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಸರಬರಾಜು ಮಾಡಿದ್ದರು.

ಇದನ್ನೂ ಓದಿ:ಕಲ್ಲು, ಮರಳು ಗಣಿಗಾರಿಕೆ ಬಾಬ್ತಿನ ರಾಜಧನ ಸೋರಿಕೆ ತಡೆಗಟ್ಟಲು ಕ್ರಮ: ಸಿಎಂ ಬೊಮ್ಮಾಯಿ

ಈ ಬಾಬ್ತು ಬಿಲ್ ಪಾವತಿ ಮಾಡಲು ಕೋರಿದಾಗ, 11 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸ್.ಬಿ.ಲೋಕೇಶ್ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಿದ್ದರು.

ಸೆ.22 ಗುರುವಾರ 11 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ನರಸಿಂಹಮೂರ್ತಿ ಹಣದ ಸಮೇತ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಯನ್ನು ಬಂಧಿಸಿದ್ದು, ಹಣವನ್ನು ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಿ.ಮಂಜುನಾಥ್ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Advertisement

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ ಟ್ರಾö್ಯಪ್ ನಡೆದಿದ್ದು, ಲೋಕಾಯುಕ್ತ ಕಚೇರಿಯ ಪೊಲೀಸ್ ನಿರೀಕ್ಷಕರಾದ ಬಿ.ಕೆ.ಲತಾ, ವೈ.ಎನ್.ಶಿಲ್ಪಾ, ಸಿಬ್ಬಂದಿಗಳಾದ ಜಿ.ಎಂ.ತಿಪ್ಪೇಸ್ವಾಮಿ, ಎಚ್.ಶ್ರೀನಿವಾಸ್, ಎಸ್.ಆರ್.ಪುಷ್ಪಾ, ಕೆ.ಟಿ.ಮಾರುತಿ, ಎಲ್.ಜಿ.ಸತೀಶ್, ಜಿ.ಎನ್.ಸಂತೋಷ್‌ಕುಮಾರ್, ಆರ್.ಟಿ.ಚಂದ್ರಶೇಖರ್, ಎಂ.ವೀರೇಶ್, ಡಿ.ಮಾರುತಿ, ಆರ್.ವೆಂಕಟೇಶ್, ಟಿ.ವಿ.ಸಂತೋಷ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next