ಚಿತ್ರದುರ್ಗ: ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಟ್ಟಾಗಿ ಜನಾಶೀರ್ವಾದ ಕಾರ್ಯಕ್ರಮ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಆಂಜನೇಯ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್ ಜನಾಶೀರ್ವಾದ
ಸರ್ಕಾರಿ ಕಾರ್ಯ ಕ್ರಮವಾದರೆ ತಾವು ಪಾಲ್ಗೊಳ್ಳಲ್ಲ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ.
ಸರ್ಕಾರಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಭಾಗಿಯಾಗಲು ಬರುವುದಿಲ್ಲ. ಆದರೆ, ಪಕ್ಷದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಬಹುದು ಎಂದು ಪರಮೇಶ್ವರ್ ಹೇಳಿರುವುದು ಸರಿಯಾಗಿದೆ ಎಂದರು. ಈ ವಿಷಯವಾಗಿ ಯಾವುದೇ ಭಿನ್ನಾಭಿಪ್ರಾಯ ಮೂಡಿಲ್ಲ. ಪಕ್ಷ ಮತ್ತು ಸರ್ಕಾರ ಒಟ್ಟಾಗಿ ಜನಾಶೀರ್ವಾದ ಕಾರ್ಯಕ್ರಮ ರೂಪಿಸಲಾಗುವುದು. ಪರಮೇಶ್ವರ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಅವರ ನೇತೃತ್ವದಲ್ಲೇ
ಕಾರ್ಯಕ್ರಮ ಮಾಡಲಾಗುವುದು ಎಂದರು.
ವಸತಿ ಶಾಲೆಗೆ 3500
ಶಿಕ್ಷಕರ ನೇಮಕ ಶೀಘ್ರ
ಹಿರೇಕೆರೂರ: ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿ ಅಗತ್ಯ ಸೌಲಭ್ಯಗಳನ್ನು ನೀಡಿ, ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದಟಛಿವಾಗಿದೆ. ವಸತಿ ಶಾಲೆಗಳಿಗೆ 3500 ಶಿಕ್ಷಕರ ನೇಮಕಾತಿ ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.
ತಾಲೂಕಿನ ದೂದೀಹಳ್ಳಿ ಗ್ರಾಮದಲ್ಲಿ ಶುಕ್ರವಾರ ಕಿತ್ತೂರು ರಾಣಿ ಚನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಕಟ್ಟಡ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಮುಂದಿನ ತಿಂಗಳಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಎಲ್ಲ ವರ್ಗದ 1.5 ಲಕ್ಷ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಗುವುದು. ಕಾಂಗ್ರೆಸ್ ಸರ್ಕಾರಕ್ಕೆ ಹಣದ ಕೊರತೆ ಇಲ್ಲ, ಇಚ್ಛಾಶಕ್ತಿಯ ಕೊರತೆಯೂ ಇಲ್ಲ. ಆಂಗ್ಲ ವ್ಯಾಮೋಹದಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿದ್ದು, ಖಾಸಗಿ ಶಾಲೆಗಳು ಸುಲಿಗೆ ಕೇಂದ್ರಗಳಾಗಿವೆ. ಕನ್ನಡ ಶಾಲೆಗಳಿಗೆ ಗೌರವ ಸಿಗಬೇಕು ಎಂದರು.