Advertisement
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹೆಸರಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳುವಿವಿಧ ಸಮಾಜಮುಖೀ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಶುಭ ಕೋರಿದ್ದಾರೆ ಎಂದರು.
Related Articles
Advertisement
ಬಿಜೆಪಿಯ ಮಾಜಿ ನಗರ ಅಧ್ಯಕ್ಷ ಮಂಜುನಾಥ (ಎಂಎಲ್‌ಎ) ಮಾತನಾಡಿ, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಿದೆ. ನಗರದ 15ನೇ ವಾರ್ಡ್‌ನ ಅಭಿವೃದ್ಧಿಗಾಗಿ ಸಮಿತಿ ರಚಿಸಲಾಗಿದೆ ಎಂದರು.
“”ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಘೋಷಣೆ ಮೂಲಕ ಸರ್ವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಪ್ರಧಾನಿ ಮೋದಿ ಅವರು ವಿಶ್ವವೇ ಭಾರತದತ್ತ ನೋಡುವಂತಹ ಸಾಧನೆ ಮಾಡಿದ್ದಾರೆ ಎಂದರು. ನಗರಸಭಾ ಮಾಜಿ ಸದಸ್ಯ ಮಹಾಕಾಳಿ ಬಾಬು, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಭಿಲಾಷ್‌ಗೌಡ, ಕಿರಣ್, ಮುಖಂಡರಾದ ಲಕ್ಷ್ಮೀನಾರಾಯಣಗುಪ್ತ ಮತ್ತಿತರರು ಉಪಸ್ಥಿತರಿದ್ದರು.
ರಾಜಕೀಯ ಚಾಣಕ್ಷತೆ, ಉತ್ತಮ ಬಾಂಧವ್ಯ : ಗುಡಿಬಂಡೆ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ರಾಜತಾಂತ್ರಿಕತೆ ನಡೆಯಿಂದ ಇಡೀ ವಿಶ್ವವೇ ಇಂದು ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಮುಖಂಡ ಜಿ.ಎಸ್.ನಾಗರಾಜು ಹೇಳಿದರು. ಪಟ್ಟಣದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಡ್ರಗ್ಸ್ ಮುಕ್ತ ಕರ್ನಾಟಕ್ಕಾಗಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿಯವರ ರಾಜಕೀಯ ಚಾಣಕ್ಷತನದಿಂದ ಎಲ್ಲಾ ದೇಶಗಳ ನಡುವೆ ಉತ್ತಮ ಬಾಂಧವ್ಯ ಹೊಂದಿ ಗಮನ ಸೆಳೆದಿದ್ದಾರೆ ಎಂದರು.
ಪಟ್ಟಣದ ಮುಖ್ಯರಸ್ತೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕ್ಕಾಗಿ ಅಭಿಯಾನ ಹಾಗೂ ನಶೆ ಮುಕ್ತ ಜೀವನ ಸುಖ ಮಯ ಜೀವನ ಎಂಬ ಘೋಷಣೆಯೊಂದಿಗೆ ಜಾಗೃತಿ ಜಾಥಾ ನಡೆಸಿ, ತಾಲೂಕು ಕಚೇರಿ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಪ್ರತಿಜ್ಞಾ ವಿಧಿಯನ್ನು ಪಕ್ಷದ ತಾಲೂಕು ಅಧ್ಯಕ್ಷ ಗಂಗರೆಡ್ಡಿ ಬೋಧಿಸಿದರು. ಬಿಜೆಪಿ ಪಕ್ಷದ ಮುಖಂಡರಾದ ತಿಮ್ಮಾರೆಡ್ಡಿ, ಪದ್ಮಾವತಮ್ಮ, ರಾಜಗೋಪಾಲ, ನಾಗಭೂಷಣ್, ಮದನ್ ಮೋಹನ್ ರೆಡ್ಡಿ, ವರ‌್ಲಕೊಂಡ ಮಂಜುನಾಥ, ನಂದೀಶ್, ವೆಂಕಟೇಶ್, ಅಮರೇಶ್, ಪೃಥ್ವಿ, ಶ್ರೀನಿವಾಸ್, ಶಿವಪ್ಪ, ಬಾಲಾಜಿ, ಜಿ.ಎಸ್.ನವೀನ್, ಬಾಬು, ನರಸಿಂಹಮೂರ್ತಿ, ಹರೀಶ್ ರೆಡ್ಡಿ, ನಡಿಪನ್ನ ಇದ್ದರು.